Advertisement

ಹಿಂದಿ ದಿವಸ್ ಆಚರಣೆ; ಕನ್ನಡ ಭಾಷಾ ದಿನ ಯಾವಾಗ ಆಚರಿಸುತ್ತೀರಿ? ಎಚ್ ಡಿಕೆ ಟ್ವೀಟ್

09:47 AM Sep 15, 2019 | Nagendra Trasi |

ಬೆಂಗಳೂರು: ದೇಶಾದ್ಯಂತ ಕೇಂದ್ರ ಸರಕಾರ ಇಂದು(ಶನಿವಾರ) ಹಿಂದಿ ದಿವಸ್ ಆಚರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಕನ್ನಡದ ಭಾಷಾ ದಿನವನ್ನು ದೇಶಾದ್ಯಂತ ಯಾವಾಗ ಆಚರಿಸುತ್ತೀರಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.

Advertisement

ಹಿಂದಿ ದಿವಸ್ ಆಚರಣೆಯಲ್ಲಿ ಭಾಗವಹಿಸಿ ಮಾತನಾಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಭಾರತದಲ್ಲಿ ಹಿಂದಿಯೇ ರಾಷ್ಟ್ರಭಾಷೆಯಾಗಬೇಕು. ಹಿಂದಿ ಭಾಷೆಯ ಮೂಲಕವೇ ಭಾರತ ವಿಶ್ವ ಮಟ್ಟದಲ್ಲಿ ಗುರುತಿಸುವಂತಾಗಬೇಕು ಎಂದು ಅಭಿಪ್ರಾಯವ್ಯಕ್ತಪಡಿಸಿದ್ದರು.

ಇದೀಗ ಹಿಂದಿ ದಿವಸ್ ನಲ್ಲಿ ಹಿಂದಿ ಕುರಿತು ಪ್ರಸ್ತಾಪವಾಗುತ್ತಿದ್ದಂತೆಯೇ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ನಲ್ಲಿ, ಇಂದು ದೇಶಾದ್ಯಂತ ಕೇಂದ್ರ ಸರ್ಕಾರ ಹಿಂದಿ ದಿವಸ್ ಆಚರಿಸುತ್ತಿದೆ. ಸಂವಿಧಾನದಲ್ಲಿ ಹಿಂದಿಯೊಂದಿಗೆ ಅಧಿಕೃತ ಭಾಷೆ ಎನಿಸಿಕೊಂಡಿರುವ ಕನ್ನಡದ ಭಾಷಾ ದಿವಸವನ್ನು ದೇಶಾದ್ಯಂತ ಯಾವಾಗ ಆಚರಿಸುತ್ತೀರಿ ಪ್ರಧಾನಿ ನರೇಂದ್ರ ಮೋದಿಯವರೇ? ಕನ್ನಡಿಗರೂ ಈ ಒಕ್ಕೂಟ ವ್ಯವಸ್ಥೆಯ ಭಾಗವಾಗಿದ್ದಾರೆ ನೆನಪಿರಲಿ..#StopHindiImposition #HindiDiwas #ಕನ್ನಡ ದಿನ ಹ್ಯಾಶ್ ಟ್ಯಾಗ್ ಬಳಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next