Advertisement

”ಚೆಲುವರಾಯಸ್ವಾಮಿಯನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ’

03:45 AM Feb 16, 2017 | Team Udayavani |

ನಾಗಮಂಗಲ: ಸದ್ಯಕ್ಕೆ ಅಮಾನತ್ತಿನಲ್ಲಿರುವ ನಾಗಮಂಗಲ ಶಾಸಕ ಚೆಲುವರಾಯಸ್ವಾಮಿಯನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ.

Advertisement

ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಕನ್ನಾಘಟ್ಟ ಗ್ರಾಮದಲ್ಲಿ ಬುಧವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಚೆಲುವರಾಯಸ್ವಾಮಿಯನ್ನು ಪುನಃ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಿ ಎಂದು ನಾಗಮಂಗಲ ಕ್ಷೇತ್ರದ ಯಾವೊಬ್ಬ ಕಾರ್ಯಕರ್ತರೂ ತಮ್ಮ ಬಳಿ ಕೇಳಿಕೊಂಡಿಲ್ಲ.  ಗೋಪಾಲಯ್ಯ ಅವರು ಕ್ಷಮೆ ಕೋರಿ ಮತ್ತೆ ಪಕ್ಷಕ್ಕೆ ಮರಳಿದ್ದಾರೆ. ಉಳಿದ ಏಳು ಮಂದಿಯನ್ನು ಪುನಃ ಪಕ್ಷಕ್ಕೆ ಸೇರಿಸಿಕೊಳ್ಳುವ ಪ್ರಶ್ನೆಯೇ ಇಲ್ಲ.

ಮುಂಬರುವ ವಿಧಾನಸಭೆ ಚುನಾವಣೆಗೆ ನಾಗಮಂಗಲ ಸೇರಿದಂತೆ ಜೆಡಿಎಸ್‌ನಿಂದ ಅಮಾನತ್ತುಗೊಂಡಿರುವ ಶಾಸಕರ ಕ್ಷೇತ್ರಗಳಲ್ಲಿ  ಪಕ್ಷದ ಅಭ್ಯರ್ಥಿಗಳ ಆಯ್ಕೆ  ಅಂತಿಮವಾಗಿಲ್ಲ. ಸ್ಥಳೀಯ ಕಾರ್ಯಕರ್ತರ ಅಭಿಪ್ರಾಯ ಪಡೆದು ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next