Advertisement

“ಒಟಿಟಿ ಶೋ ಸೆನ್ಸಾರ್‌ ಅಗತ್ಯ’

12:04 AM Mar 05, 2021 | Team Udayavani |

ಹೊಸದಿಲ್ಲಿ: ಭಾರೀ ಜನಪ್ರಿಯತೆ ಗಿಟ್ಟಿಸಿಕೊಂಡಿರುವ ಓವರ್‌ ದಿ ಟಾಪ್‌ (ಒಟಿಟಿ)ಗಳ “ಶೋ’ಗಳನ್ನು ಸೆನ್ಸಾರ್‌ಗೆ ಒಳಪಡಿಸಬೇಕಾದ ಅನಿವಾರ್ಯ ಇದೆ ಎಂದು ಸುಪ್ರೀಂ ಕೋರ್ಟ್‌ ಅಭಿಪ್ರಾಯಪಟ್ಟಿದೆ.

Advertisement

ಒಟಿಟಿಗಳ ಕೆಲವು ಸಿನೆಮಾ ಮತ್ತು ಸರಣಿಗಳಲ್ಲಿ ಅಶ್ಲೀಲ ದೃಶ್ಯಾವಳಿ ಇರುವುದನ್ನು ಗಮನಿಸಿದ್ದೇವೆ. ಹೀಗಾಗಿ ಇವುಗಳನ್ನು ಸಾರ್ವಜನಿಕವಾಗಿ ಪ್ರಸಾರ ಮಾಡುವ ಮುನ್ನ ಸೆನ್ಸಾರ್‌ ಮಾಡಲೇಬೇಕು ಎಂದು ಕೋರ್ಟ್‌ ಹೇಳಿದೆ. ಅಮೆಜಾನ್‌ ಪ್ರೈಮ್‌ನ ಅಪರ್ಣಾ ಅವರ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾ| ಅಶೋಕ್‌ ಭೂಷಣ್‌ ನೇತೃತ್ವದ ನ್ಯಾಯಪೀಠ ಈಅಭಿಪ್ರಾಯ ವ್ಯಕ್ತಪಡಿಸಿದ್ದು, ಒಟಿಟಿ ನಿಯಂತ್ರಣಕ್ಕಾಗಿ ಕೇಂದ್ರ ಸರಕಾರ ರೂಪಿಸಿರುವ ನಿಯಮಾವಳಿಗಳನ್ನು ನ್ಯಾಯಪೀಠಕ್ಕೆ ಸಲ್ಲಿಸಬೇಕೆಂದು ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಅವರಿಗೆ ಸೂಚಿಸಿತು.

Advertisement

Udayavani is now on Telegram. Click here to join our channel and stay updated with the latest news.

Next