Advertisement

ಸಮಸ್ಯೆ ಪರಿಹರಿಸಲು ಕೇಂದ್ರ ವಿಫ‌ಲ

12:20 PM Nov 05, 2018 | Team Udayavani |

ಬೆಂಗಳೂರು: ವೈಫ‌ಲ್ಯಗಳನ್ನು ಮರೆಮಾಚಲು ಭಾವನಾತ್ಮಕ ವಿಷಯಗಳನ್ನು ಮುನ್ನೆಲೆಗೆ ತರುವ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ, ದೇಶದ ಜನರಿಗೆ ಮೋಸ ಮಾಡುತ್ತಿದೆ ಎಂದು ಚಿಂತಕ ಡಾ.ಜಿ.ರಾಮಕೃಷ್ಣ ಅಭಿಪ್ರಾಯಪಟ್ಟಿದ್ದಾರೆ.

Advertisement

ನಗರದ ಗಾಂಧಿ ಭವನದಲ್ಲಿ ಭಾನುವಾರ ಭಾರತ ಕಮ್ಯುನಿಸ್ಟ್‌ ಪಕ್ಷ-ಬೆಂಗಳೂರು ಜಿಲ್ಲಾ ಮಂಡಳಿ ವತಿಯಿಂದ ಹಮ್ಮಿಕೊಂಡಿದ್ದ “ಮೋದಿ ಆಡಳಿತ-ಒಂದು ವಿಮರ್ಶೆ’ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಬಗ್ಗೆ ಅಭಿಮಾನ, ಪ್ರೀತಿ ಇದೇ ಎಂದು ತೋರಿಸಿಕೊಳ್ಳುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ, ನಿರುದ್ಯೋಗ, ಬಡತನ ಹಾಗೂ ಆರ್ಥಿಕ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸೋತಿದೆ ಎಂದು ಹೇಳಿದರು. 

ಎನ್‌ಡಿಎ ಸರ್ಕಾರದ ಜನವಿರೋಧಿ ನೀತಿಗಳನ್ನು ವಿರೋಧಿಸಿ ಬೀದಿಗಳಿದು ಪ್ರತಿಭಟಿಸಿದರೆ, ಸ್ವಲ್ಪ ದಿನ ಆಡಳಿತ ನಡೆಸಲು ಅವಕಾಶ ಕೊಡಬೇಕು ಎಂದು ಕೆಲವರು ಹೇಳುತ್ತಾರೆ. ಆದರೆ, ನಮ್ಮ ಕಣ್ಣು ಮುಂದೆಯೇ ಅನ್ಯಾಯ ನಡೆಯುತ್ತಿದ್ದರೆ, ಅದನ್ನು ನೋಡಿಯೂ ಸುಮ್ಮನಿರುವುದು ಹೇಗೆ? ಎಂದು ಪ್ರಶ್ನಿಸಿದರು.

ಕೃತಿಯ ಲೇಖಕ ಡಾ. ಸಿದ್ದನಗೌಡ ಪಾಟೀಲ್‌ ಮಾತನಾಡಿ, ದೇಶದಲ್ಲಿ ಇಂದು ತೀವ್ರತರವಾದ ಕೃಷಿ ಬಿಕ್ಕಟ್ಟು ನಿರ್ಮಾಣವಾಗಿದೆ. ಉದ್ಯೋಗದ ಅವಕಾಶಗಳನ್ನು ಸೃಷ್ಟಿಸುವಲ್ಲಿ ಕೇಂದ್ರ ಸರ್ಕಾರ ವಿಫ‌ಲವಾಗಿದೆ. ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸಲಾಗುವುದು ಎಂದು ಬಿಜೆಪಿಯ ಚುನಾವಣಾ ಘೋಷಣೆಯಾಗಿತ್ತು. ಆದರೆ, ಅಧಿಕಾರಕ್ಕೆ ಬಂದಾಗಿನಿಂದ ಇಲ್ಲಿತನಕ 10 ಲಕ್ಷ ಉದ್ಯೋಗಗಳನ್ನು ಮಾತ್ರ ಸೃಷ್ಟಿಸಲಾಗಿದೆ.

ರಫ್ತು ಪ್ರಮಾಣ ಕುಸಿದಿದೆ. ತೈಲ ಹಾಗೂ ಇತರ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ ಎಂದು ವಿಷಾದಿಸಿದರು. ಕಾರ್ಯಕ್ರಮದಲ್ಲಿ ಎಐಟಿಯುಸಿ ಬೆಂಗಳೂರು ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ಎಂ.ಡಿ.ಹರಿಗೋವಿಂದ್‌, ಸಿಪಿಐ ಬೆಂಗಳೂರು ಜಿಲ್ಲಾ ಮಂಡಳಿ ಕಾರ್ಯದರ್ಶಿ ಜಿ.ಬಾಬು, ಮುಖಂಡರಾದ ಮುರಳಿಧರ್‌, ಎಂ.ಸತ್ಯಾನಂದ ಉಪಸ್ಥಿತರಿದದರು. 

Advertisement
Advertisement

Udayavani is now on Telegram. Click here to join our channel and stay updated with the latest news.

Next