Advertisement

“ಆದರ್ಶ ಗ್ರಾಮಕ್ಕೆ ಹಣ ಕೊಡದ ಕೇಂದ್ರ’

12:20 PM Jun 26, 2017 | Team Udayavani |

ಎಚ್‌.ಡಿ.ಕೋಟೆ: ತಾಲೂಕಿನ ಗಡಿಭಾಗದ ಬಿ.ಮಟಕೆರೆ ಗ್ರಾಮ ಪಂಚಾಯಿತಿಯನ್ನು ಅಭಿವೃದ್ಧಿಪಡಿಸಲು ಸಂಸದರ ಆದರ್ಶ ಗ್ರಾಮವನ್ನಾಗಿ ಆಯ್ಕೆ ಮಾಡಲಾಗಿದೆ. ಆದರೂ, ಕೇಂದ್ರ ಸರ್ಕಾರ ಯಾವುದೇ ಅನುದಾನ ನೀಡಿಲ್ಲ. ಆದ್ದರಿಂದ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದ ಮೂಲಕ ಕೋಟ್ಯಂತರ ರೂ. ವೆಚ್ಚದಲ್ಲಿ ಅಭಿವೃದ್ಧಿ ಕೆಲಸ ಮಾಡಲಾಗಿದೆ ಎಂದು ಸಂಸದ ಆರ್‌.ಧ್ರುವನಾರಾಯಣ ತಿಳಿಸಿದರು.

Advertisement

ತಾಲೂಕಿನ ಬಿ.ಮಟಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ವಸತಿ ಶಾಲೆ, ಪಶುವೈದ್ಯಕೀಯ ಕೇಂದ್ರ ಮತ್ತು ಭಾರತ್‌ ನಿರ್ಮಾಣ್‌ ರಾಜೀವ್‌ ಗಾಂಧಿ ಸೇವಾ ಕೇಂದ್ರ ಉದ್ಘಾಟಿಸಿ ಮಾತನಾಡಿದರು.

ಕೇಂದ್ರ ಸರ್ಕಾರ ಸಂಸದರ ಆದರ್ಶ ಗ್ರಾಮ ಯೋಜನೆ ಪ್ರಾರಂಭಿಸಿದೆ. ಆದರೆ, ಈ ನಿಟ್ಟಿನಲ್ಲಿ ಅಭಿವೃದ್ಧಿಪಡಿಸಲು ಯಾವುದೇ ಅನುದಾನ ನೀಡದೆ ನಿರ್ಲಕ್ಷಿಸಲಾಗಿದೆ. ಹೀಗಿದ್ದರೂ ಗ್ರಾಮದ ಅಭಿವೃದ್ಧಿಗಾಗಿ ಸಚಿವ ಮಹದೇವಪ್ಪನವರು ನೀಡಿದ 20 ಕೋಟಿ ರೂ. ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಮಾಡಲಾಗಿದೆ. ಹಾಗೆಯೇ ಎಸ್‌ಇಪಿ, ಟಿಎಸ್‌ಪಿ ಯೋಜನೆಯಡಿ ನಾಲ್ಕು ಹಾಡಿಗಳನ್ನು, 1.60 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟ್‌ ರಸ್ತೆ ಮತ್ತು ಚರಂಡಿ ನಿರ್ಮಿಸಲಾಗಿದೆ ಎಂದರು.

ಕಾಡಂಚಿನ ಗ್ರಾಮ ಅಭಿವೃದ್ಧಿ: ಬಿ.ಮಟಕೆರೆ ಕಾಡಂಚಿನ ಗ್ರಾಮವಾಗಿದ್ದು, ಇದನ್ನು ಸಂಸದರ ಆದರ್ಶ ಗ್ರಾಮವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಇದಕ್ಕೆ ಕೇಂದ್ರ ಸರ್ಕಾರದಿಂದ ವಿಶೇಷ ಅನುಧಾನ ನೀಡುತ್ತಿಲ್ಲ. ಈ ಬಗ್ಗೆ ಎಲ್ಲಾ ಸಂಸದರು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಉದ್ಯೋಗ ಖಾತ್ರಿ ಯೋಜನೆ ಗ್ರಾಮ ಪಂಚಾಯಿತಿಗಳಿಗೆ ವರದಾನವಾಗಿದ್ದು, ಇದರಡಿ ಹಲವು ಗ್ರಾಮಗಳ ಅಭಿವೃದ್ಧಿ ಸಾಧ್ಯವಾಗಿದೆ ಎಂದರು.

ಕಳೆದ ಮೂರು ವರ್ಷಗಳಿಂದ ಬರ ಆವರಿಸಿದ್ದರೂ, ಉಪಕಸುಬಾದ ಹೈನುಗಾರಿಕೆಯು ರೈತರನ್ನು ಉಳಿಸಿದೆ. ಪ್ರಪಂಚದಲ್ಲೇ ಭಾರತ ಹೆಚ್ಚು ಜಾನುವಾರುಗಳನ್ನು ಹೊಂದಿರುವ ದೇಶ. ಕರ್ನಾಟಕ ಹಾಲು ಉತ್ಪಾದನೆಯಲ್ಲಿ 2ನೇ ಸ್ಥಾನದಲ್ಲಿದ್ದು, ವ್ಯವಸಾಯಕ್ಕೆ ಹೈನುಗಾರಿಕೆ ಸಹಕಾರಿ ಎಂದರು.

Advertisement

ಈ ಸಾಲಿನ ಯೋಜನೆಯಲ್ಲಿ 99 ಲಕ್ಷ ರೂ.ಗಳ ಕಾಮಗಾರಿ ನಡೆಸಲಾಗಿದೆ. ಮುಂದಿನ ವರ್ಷ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ಮಶಾನ ಅಭಿವೃದ್ಧಿ, ಕೊಟ್ಟಿಗೆ ನಿರ್ಮಾಣ, ಶಾಲಾ ಕಂಪೌಂಡ್‌ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಕನಿಷ್ಠ 3 ಕೋಟಿ ರೂ.ಗಳಷ್ಟು ಕೆಲಸ ಮಾಡುವಂತೆ ಗ್ರಾಮ ಪಂಚಾಯಿತಿ ಸದಸ್ಯರಿಗೆ ಸೂಚಿಸಿದರು.

ವಸತಿ ಶಾಲೆ ಪ್ರಯೋಜನವಾಗಲಿ: ಐಎಎಸ್‌ನಲ್ಲಿ ನಂದಿನಿ ಪ್ರಥಮ ರ್‍ಯಾಂಕ್‌ ಪಡೆದಿದ್ದಾರೆ. ಇವರನ್ನು ಆದರ್ಶವಾಗಿಟ್ಟುಕೊಂಡು ಕಾಡಂಚಿನ ಗ್ರಾಮಗಳಲ್ಲಿನ ಹೆಣ್ಣು ಮಕ್ಕಳು ಅಂಬೇಡ್ಕರ್‌ ವಸತಿ ಶಾಲೆ ಮತ್ತು ಆಶ್ರಮ ಶಾಲೆಗಳ ಪ್ರಯೋಜನ ಪಡೆಯಬೇಕೆಂದು ತಿಳಿಸಿದರು. ಪ್ರತಿಯೊಬ್ಬರೂ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು. ಸರ್ಕಾರ ಹೋಬಳಿಗೊಂದು ವಸತಿ ಶಾಲೆ ಪ್ರಾರಂಭಿಸಿದ್ದು, ಆಂಗ್ಲಮಾಧ್ಯಮ ವಸತಿ ಶಾಲೆಯನ್ನು ತೆರೆಯಲಾಗಿದೆ ಎಂದರು.

ತಾಲೂಕು ಪಂಚಾಯಿತಿ ಅಧ್ಯಕ್ಷೆ ಮಂಜುಳಾ ದೇವಣ್ಣ, ಉಪಾಧ್ಯಕ್ಷೆ ಮಂಜುಳಾ ಚಂದ್ರೇಗೌಡ, ಜಿಲ್ಲಾ ಪಂಚಾಯಿತಿ ಸದಸ್ಯರಾದ ವೆಂಕಟಸ್ವಾಮಿ, ಎಸ್‌.ಶ್ರೀಕೃಷ್ಣ, ಎಪಿಎಂಸಿ ಅಧ್ಯಕ್ಷ ಸಿದ್ಧರಾಜು, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಿಲ್ಪಾ ಸತೀಶ್‌, ಉಪಾಧ್ಯಕ್ಷ ಮಾಣº, ಸದಸ್ಯ ಸಂತೋಷ್‌, ಶಿವರಾಜು, ಶಿವಪ್ಪ ಇತರು ಇದ್ದರು. ಜಿಲ್ಲಾ ಯೋಜನಾಧಿಕಾರಿ ಪ್ರಭುಸ್ವಾಮಿ, ತಹಶೀಲ್ದಾರ್‌ ಎಂ.ನಂಜುಂಡಯ್ಯ, ಇಒ ಶ್ರೀಕಂಠರಾಜೇ ಅರಸ್‌, ಎಇಇ ನಾಗರಾಜು, ಸುನಿಲ್‌, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೈ.ಬಿ.ಈಶಕುಮಾರ್‌, ಜೆ.ನವೀನ್‌ ಇದ್ದರು.

ಎಚ್‌.ಡಿ.ಕೋಟೆ ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್‌ ಆಗಿ ಸೇವೆ ಸಲ್ಲಿಸುತ್ತಿರುವ ಎಂ.ನಂಜುಂಡಯ್ಯನವರಿಗೆ ಮಾನಸಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಅಧಿಕಾರಿಗಳು ಹಾಗೂ ಭೂ ಸುಧಾರಣೆ ಕಾಯ್ದೆ ಉಲ್ಲಂ ಸಿದ ವ್ಯಕ್ತಿಗಳ ವಿರುದ್ಧ ತನಿಖೆ ನಡೆಸಿ, ಶೀಘ್ರ ಕ್ರಮ ಕೈಗೊಂಡು ವರದಿ ನೀಡುವಂತೆ ಜಿಲ್ಲಾಧಿಕಾರಿಯವರಿಗೆ ಸೂಚಿಸಿದ್ದೇನೆ.
-ಆರ್‌.ಧೃವನಾರಾಯಣ್‌, ಸಂಸದರು

Advertisement

Udayavani is now on Telegram. Click here to join our channel and stay updated with the latest news.

Next