ನವ ದೆಹಲಿ : ಅಸಂಘಟಿತ ವಲಯದ ಕಾರ್ಮಿಕರಿಗೆ ಸಂಬಂಧಿಸಿದ ಮಾಹಿತಿಯ ಕೋಶವಾಗಿ ‘ಇ–ಶ್ರಮ್’ಪೋರ್ಟಲ್ ನನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಾಳೆ (ಗುರುವಾರ, ಆಗಸ್ಟ್ 26) ಚಾಲನೆ ನೀಡಲಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಭೂಪೇಂದರ್ ಯಾದವ್, ‘ಇ–ಶ್ರಮ್’ ಪೋರ್ಟಲ್ ಮೂಲಕ ದೇಶದಲ್ಲಿನ ಅಸಂಘಟಿತ ವಲಯದ ಸುಮಾರು 38 ಕೋಟಿ ಕಾರ್ಮಿಕರನ್ನು ನೋಂದಣಿ ಮಾಡಿಸುವ ಉದ್ದೇಶ ಸರ್ಕಾರಕ್ಕೆ ಇದೆ. ಈ ಪೋರ್ಟಲ್ ಗೆ ಚಾಲನೆ ನೀಡಿದ ನಂತರ ಅಸಂಘಟಿತ ವಲಯದ ಕಾರ್ಮಿಕರು ತಮ್ಮ ಹೆಸರು ನೋಂದಾವಣಿ ಮಾಡಿಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ : ನವಿಮುಂಬಯಿ ಮೆಟ್ರೋ: ಸೆಂಟ್ರಲ್ ಪಾರ್ಕ್- ಪೆಂಡಾರ್ ಪ್ರಾಯೋಗಿಕ ಪರೀಕ್ಷೆ
ನೋಂದಣಿ ವಿಚಾರಕ್ಕೆ ಸಂಬಂಧ ಪಟ್ಟಂತಹ ಯಾವುದೇ ಸಂದೇಹಗಳಿದ್ದಲ್ಲಿ, ಅದನ್ನು ಬಗೆಹರಿಸುವ ಉದ್ದೇಶದಿಂದ ಸಹಾಯವಾಣಿ 14434 ಗೆ ಕೂಡ ನಾಳೆ ಚಾಲನೆ ನೀಡಲಾಗುತ್ತದೆ. ನೋಂದಣಿ ಮಾಡಿಸಿಕೊಂಡ ಅಸಂಘಟಿತ ಕಾರ್ಮಿಕರಿಗೆ 12 ಅಂಕಿಗಳಿರುವ ಗುರುತಿನ ಚೀಟಿಯನ್ನು ಕೂಡ ನೀಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಸಾಮಾಜಿಕ ಭದ್ರತಾ ಯೋಜನೆಗಳನ್ನು ಒಂದೇ ಸೂರಿನಡಿಯಲ್ಲಿ ತರುವ ಉದ್ದೇಶ ಕೂಡ ‘ಇ–ಶ್ರಮ್’ಪೋರ್ಟಲ್ ನ ಪ್ರಧಾನ ಉದ್ದೇಶವಾಗಿದೆ. ಕಾರ್ಮಿಕರು ತಮ್ಮ ಆಧಾರ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆಯ ವಿವರ ಸಲ್ಲಿಸಿ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದಿದ್ದಾರೆ.
ಇದನ್ನೂ ಓದಿ : ಅಂದು ಅಫ್ಘಾನ್ ಸರ್ಕಾರದಲ್ಲಿ ಸಚಿವ, ಇಂದು ಜರ್ಮನಿ ಬೀದಿಯಲ್ಲಿ ಪಿಜ್ಜಾ ಮಾರುತ್ತಿದ್ದಾರೆ!