Advertisement

ಕೇಂದ್ರದ ನಿಲುವು ಅತಾರ್ಕಿಕ: ಎಂ.ಬಿ.ಪಾಟೀಲ್‌

06:00 AM Dec 11, 2018 | Team Udayavani |

ಬೆಳಗಾವಿ: ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆಯನ್ನು ಒಪ್ಪದಿರುವ ಕೇಂದ್ರ ಸರ್ಕಾರದ ನಿಲುವು ಅತಾರ್ಕಿಕವಾಗಿದೆ ಎಂದು ಲಿಂಗಾಯತ ಪ್ರತ್ಯೇಕ ಧರ್ಮದ ರೂವಾರಿ ಮಾಜಿ ಸಚಿವ ಎಂ.ಬಿ. ಪಾಟೀಲ್‌ ಹೇಳಿದ್ದಾರೆ.

Advertisement

ಕೇಂದ್ರ ಸರ್ಕಾರ ರಾಜ್ಯ ಸರ್ಕಾರದ ಪ್ರಸ್ತಾಪವನ್ನು ತಿರಸ್ಕರಿಸಿರುವ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು. ಕೇಂದ್ರ ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿರುವಂತೆ 1871ರ ಜನಗಣತಿ ವೇಳೆಯಲ್ಲಿ ಲಿಂಗಾಯತರು ಹಿಂದೂ ಧರ್ಮದ ಭಾಗವಾಗಿರಲಿಲ್ಲ. ಆ ಸಂದರ್ಭದಲ್ಲಿ ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆ ಹೊಂದಿತ್ತು ಎಂದು ಹೇಳಿದ್ದಾರೆ.ಲಿಂಗಾಯತರಿಗೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡಿದರೆ, ಲಿಂಗಾಯತ ವೀರಶೈವರಲ್ಲಿ ಈಗಾಗಲೇ ಪರಿಶಿಷ್ಠ ಜಾತಿಯ ಸೌಲಭ್ಯ ಪಡೆಯುತ್ತಿರುವವರು ಅದರಿಂದ ವಂಚಿತರಾಗುತ್ತಾರೆ ಎನ್ನುವುದು ಸುಳ್ಳು. 

ಈಗಾಗಲೇ ಈ ಷಯದ ಬಗ್ಗೆ ಸಿಖ್‌ ಹಾಗೂ ಜೈನ ಧರ್ಮಗಳಿಗೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡುವಾಗ ಯುಕ್ತಾ ಯುಕ್ತ ರೀತಿಯಲ್ಲಿ ಪರಿಗಣಿಸಿ ನಿರ್ಧಾರ ಕೈಗೊಳ್ಳಲಾಗಿದೆ.  ಸಿಖ್‌ ಹಾಗೂ ಜೈನ ಧರ್ಮಗಳಲ್ಲಿಯೂ ಪರಿಶಿಷ್ಟ ಜಾತಿಯ ಜನರಿದ್ದಾರೆ ಎನ್ನುವುದನ್ನು ಮರೆಯುವಂತಿಲ್ಲ ಎಂದರು.

ಹೀಗಿರುವಾಗ ಲಿಂಗಾಯತ ಧರ್ಮದ ಮಾನ್ಯತೆ ನೀಡುವ ಪ್ರಸ್ತಾವದ ವೇಳೆಯಲ್ಲಿಯೂ ಈ ಅಂಶವನ್ನು ಪರಿಗಣಿಸುವ ಅಗತ್ಯತ್ತು. ಕೇಂದ್ರ ಸರ್ಕಾರದ ನಿಲುವಿನಿಂದ ಬಸವ ಹಾಗೂ ಲಿಂಗಾಯತ ಧರ್ಮದ ಅನುಯಾಯಿಗಳು ಯಾವುದೇ ರೀತಿಯಲ್ಲಿಯೂ ಅತಂಕಪಡುವ ಅಗತ್ಯಲ್ಲ. ಮುಂದಿನ ನಡೆಯನ್ನು ಲಿಂಗಾಯತ ಮಹಾಸಭೆಯ ಪದಾಧಿಕಾರಿಗಳು, ಕಾನೂನು ತಜ್ಞರು, ಮಠಾಧೀಶರು ಹಾಗೂ ಸಮಾಜದ ಹಿರಿಯರ ಜೊತೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಹೇಳಿದರು.

ಬೌದ್ಧ, ಸಿಖ್‌, ಮತ್ತು ಜೈನ ಧರ್ಮದಂತೆ ಬಸವ ಧರ್ಮವೂ ಪ್ರತ್ಯೇಕ ಧರ್ಮದ ಮಾನ್ಯತೆ ಹೊಂದಿದೆ. ಬಸವ ಧರ್ಮ ಮತ್ತು ಸಂಸ್ಕೃತಿ ಇಂದಲ್ಲ ನಾಳೆ ಜಾಗತಿಕ ಮಾನ್ಯತೆ ಪಡೆದೇ ತೀರುತ್ತದೆ. ಲಿಂಗಾಯತ ಧರ್ಮ ಎಂದಿಗೂ ಸ್ವತಂತ್ರ ಧರ್ಮವಾಗಿದ್ದು, ಆದ್ದರಿಂದ ಈ ಸಂದರ್ಭದಲ್ಲಿ ಲಿಂಗಾಯತರು ಸಂಯಮ ಮತ್ತು ಘನತೆಯಿಂದ ವರ್ತಿಸಬೇಕು. ಶಾಂತಿ ಕಾಪಾಡಿಕೊಂಡು ಹೋಗಬೇಕು ಎಂದು ಮನವಿ ಮಾಡಿದ್ದಾರೆ.

Advertisement

ಕೇಂದ್ರ ಸರ್ಕಾರ ಪ್ರತ್ಯೇಕ ಲಿಂಗಾಯತ ಧರ್ಮದ ಪ್ರಸ್ತಾಪವನ್ನು ತಿರಸ್ಕರಿಸಿರುವುದು ಸ್ವಾಗತಾರ್ಹ. ಯಾರೂ ಧರ್ಮವನ್ನು ಒಡೆಯಬಾರದು. ಬಸವೇಶ್ವರರೇ ಅಂತರ್‌ ಜಾತಿ ವಿವಾಹವನ್ನು ಪೋತ್ಸಾಹಿಸಿದ್ದರು. ಕೆಲವರು ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡಿರುವುದು ಬಸವೇಶ್ವರಿಗೆ ಮಾಡಿರುವ ಅವಮಾನ.
-ಕೆ.ಎಸ್‌.ಈಶ್ವರಪ್ಪ, ಬಿಜೆಪಿ ನಾಯಕ.

ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರದಲ್ಲಿ ನಾನು ಪರವಾಗಿಯೂ ಇಲ್ಲ. ವಿರೋಧವಾಗಿಯೂ ಇಲ್ಲ. ಪ್ರತ್ಯೇಕ ಧರ್ಮ ಆಗಿದ್ದರೆ ಅನುಕೂಲ ಆಗುತ್ತಿತ್ತು ಏನೋ. ಆದರೆ, ಲಿಂಗಾಯತ ಹಾಗೂ ವೀರಶೈವ ಎರಡೂ ಒಂದೇ. ಕೇಂದ್ರ ಸರ್ಕಾರದ ನಿರ್ಧಾರದ ಬಗ್ಗೆ ಸರಿಯಾದ ಮಾತಿ ಇಲ್ಲ.
-ಶಾಮನೂರು ಶಿವಶಂಕರಪ್ಪ, ಅಧ್ಯಕ್ಷ, ಅಖೀಲ ಭಾರತ ವೀರಶೈವ ಮಹಾಸಭೆ

ಧಾರ್ಮಿಕ ವಿಚಾರದಲ್ಲಿ ತಪ್ಪು ಮಾಡಿದ್ದೇವೆ ಎಂದು ಸಚಿವ ಡಿ.ಕೆ. ಶಿವಕುಮಾರ್‌ ಒಪ್ಪಿಕೊಂಡಿದ್ದಾರೆ. ಸಿದ್ದರಾಮಯ್ಯ ಕೂಡ ಯಾರದೋ ಮಾತು ಕೇಳಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿ ಪಶ್ಚಾತಾಪ ಪಟ್ಟಿದ್ದರು. ಧರ್ಮ ಒಡೆಯುವುದನ್ನು ಮೋದಿ ಮೇಲೆ ಹಾಕಿ ರಾಜಕೀಯ ಲಾಭ ಪಡೆಯಲು ಪ್ರಯತ್ನಿಸಿದ್ದ ಕಾಂಗ್ರೆಸನ್ನು ಜನರು ತಿರಸ್ಕರಿಸಿದ್ದರು.
-ಜಗದೀಶ್‌ ಶೆಟ್ಟರ್‌, ಮಾಜಿ ಮುಖ್ಯಮಂತ್ರಿ.

ರಾಜಕೀಯ ಲಾಭಕ್ಕಾಗಿ ಲಿಂಗಾಯತ ಪ್ರತ್ಯೇಕ ಧರ್ಮದ ಗಿಮಿಕ್‌ ಮಾಡಿದ್ದರು. ಈ ವಿಷಯದಲ್ಲಿ ಡಿ.ಕೆ. ಶಿವಕುಮಾರ್‌ ತಪ್ಪಾಗಿದೆ ಎಂದು ಹೇಳಿದ್ದರು. ಸಿದ್ದರಾಮಯ್ಯ ಕೂಡ ಪ್ರತ್ಯೇಕ ಧರ್ಮದ ಶಿಫಾರಸ್ಸು ಮಾಡಬಾರದಿತ್ತು ಎಂದು ಒಪ್ಪಿ$ಕೊಂಡಿದ್ದರು. ಈಗ ಕೇಂದ್ರ ಸರ್ಕಾರ ತಿರಸ್ಕಾರ ಮಾಡಿರುವುದು ಕಾಂಗ್ರೆಸ್‌ನವರಿಗೆ ಮುಖಭಂಗವಾದಂತಾಗಿದೆ.
– ಬಿ.ಎಸ್‌.ಯಡಿಯೂರಪ್ಪ, ಪ್ರತಿಪಕ್ಷದ ನಾಯಕ.

Advertisement

Udayavani is now on Telegram. Click here to join our channel and stay updated with the latest news.

Next