Advertisement

ಸಿಬಿಐ, ಇ.ಡಿ, ಎನ್ ಸಿಬಿಯನ್ನು ಕೇಂದ್ರ ಸರ್ಕಾರ ರಾಜಕೀಯ ಅಸ್ತ್ರ ಮಾಡಿಕೊಂಡಿದೆ: ಪವಾರ್

06:39 PM Oct 13, 2021 | Team Udayavani |

ನವದೆಹಲಿ: ಕೇಂದ್ರ ಸರ್ಕಾರ ಸಿಬಿಐ, ಇ.ಡಿ.(ಜಾರಿ ನಿರ್ದೇಶನಾಲಯ), ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೋಗಳಂತಹ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು, ವಿರೋಧಪಕ್ಷಗಳನ್ನು ಗುರಿಯಾಗಿರಿಸಿ ದಾಳಿ ನಡೆಸುತ್ತಿದೆ ಎಂದು ಎನ್ ಸಿಪಿ ವರಿಷ್ಠ ಶರದ್ ಪವಾರ್ ಬುಧವಾರ (ಅಕ್ಟೋಬರ್ 13) ಆರೋಪಿಸಿದ್ದಾರೆ.

Advertisement

ಇದನ್ನೂ ಓದಿ:ಡಿಕೆಶಿ ವಿರುದ್ಧ ಸಲೀಂ ಆರೋಪ: ದೂರು ನೀಡಿದರೆ ಸರಕಾರ ತನಿಖೆ ನಡೆಸುತ್ತದೆ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ನಿರಂತರವಾಗಿ ಸಿಬಿಐ, ಆದಾಯ ತೆರಿಗೆ ಇಲಾಖೆ, ಜಾರಿ ನಿರ್ದೇಶನಾಲಯಗಳನ್ನು ರಾಜಕೀಯ ಉದ್ದೇಶಗಳಿಗಾಗಿ ಬಳಸಿಕೊಳ್ಳುತ್ತಿದೆ ಎಂದು ಪವಾರ್ ದೂರಿದ್ದಾರೆ.

ವಿರೋಧ ಪಕ್ಷದಲ್ಲಿರುವ ನಾಯಕರನ್ನು ಮಟ್ಟ ಹಾಕಲು ಕೇಂದ್ರ ಸರ್ಕಾರ ಈ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ. ಶಿವಸೇನಾ, ಕಾಂಗ್ರೆಸ್ ಜತೆ ಸೇರಿ ಅಧಿಕಾರಕ್ಕೇರಿದ ನಂತರ ಮಹಾರಾಷ್ಟ್ರದಲ್ಲಿಯೂ ಈ ಬೆಳವಣಿಗೆ ನಡೆದಿದೆ ಎಂದು ಪವಾರ್ ಹೇಳಿದರು.

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಸಂಬಂಧಿಸಿದ ಕೆಲವು ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ ಬಳಿಕ ಶರದ್ ಪವಾರ್ ಈ ಪ್ರತಿಕ್ರಿಯೆ ನೀಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next