Advertisement

ಆಶಾ ಕಾರ್ಯಕರ್ತೆಯರ ಶ್ರಮಕ್ಕೆ ಕೇಂದ್ರ ಮೆಚ್ಚುಗೆ

01:46 AM Jul 04, 2020 | Sriram |

ಹೊಸದಿಲ್ಲಿ: ಕರ್ನಾಟಕ ರಾಜ್ಯವು ಕೋವಿಡ್ ಸೋಂಕನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿರುವುದಕ್ಕೆ ರಾಜ್ಯದ ಆಶಾ ಕಾರ್ಯಕರ್ತೆಯರ ಶ್ರಮ ಪ್ರಮುಖ ಕಾರಣ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮೆಚ್ಚುಗೆ ವ್ಯಕ್ತಪಡಿಸಿದೆ.

Advertisement

ಮನೆ ಮನೆಗೆ ತೆರಳಿ ಸಮೀಕ್ಷೆ,ಕೋವಿಡ್ ಪರೀಕ್ಷೆಗೆ ಒಳಪಡಿಸುವುದರ ಸಹಿತ ಹಲವು ವಿಧಗಳಲ್ಲಿ ಸೇವೆ ಸಲ್ಲಿಸಿರುವ ಕರ್ನಾಟಕದ 42 ಸಾವಿರ ಆಶಾ ಕಾರ್ಯಕರ್ತೆಯರು ರಾಜ್ಯದ ಕೋವಿಡ್ ನಿಯಂತ್ರಣದ ಯಶಸ್ಸಿನ ಆಧಾರ ಸ್ತಂಭಗಳಾಗಿದ್ದಾರೆ.

ಕೆಲವು ತಿಂಗಳುಗಳಿಂದ 1.59 ಕೋಟಿ ಮನೆ ಗಳಿಗೆ ಭೇಟಿ ನೀಡಿರುವ ಅವರು ಕುಟುಂಬಗಳ ಹಿರಿಯ ನಾಗರಿಕರು, ಸೋಂಕಿಗೆ ಬೇಗ ತುತ್ತಾಗುವ ಅಪಾಯ ಹೊಂದಿರುವವರನ್ನು ಮತ್ತು ಸಮಾಜದ ದುರ್ಬಲ ವರ್ಗಗಳನ್ನು ಗುರುತಿಸುವ ಮಹತ್ವದ ಕೆಲಸವನ್ನು ಮಾಡಿದ್ದಾರೆ ಎಂದು ಸಚಿವಾಲಯವು ಕೊಂಡಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next