Advertisement

ಉಡುಪಿ ಕಾರ್ಯವೈಖರಿಗೆ ಕೇಂದ್ರದ ಪ್ರಶಂಸೆ

09:29 AM Apr 15, 2020 | mahesh |

ಉಡುಪಿ: ಕೋವಿಡ್-19 ವೈರಸ್‌ ನಿಯಂತ್ರಣಕ್ಕೆ ಉಡುಪಿ ಜಿಲ್ಲಾಡಳಿತ ಕೈಗೊಂಡ ಕಾರ್ಯ ವೈಖರಿಗೆ ಕೇಂದ್ರ ಸರಕಾರದಿಂದ ಪ್ರಶಂಸೆ ವ್ಯಕ್ತವಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್‌ ತಿಳಿಸಿದ್ದಾರೆ.

Advertisement

ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳಿಂದ ಮಾರ್ಚ್‌ 29ರ ಬಳಿಕ ಯಾವುದೇ ಹೊಸ ಕೊರೊನಾ ಪ್ರಕರಣಗಳು ಕಂಡುಬಂದಿಲ್ಲ. ಸೋಂಕಿತರ ಸಂಪರ್ಕದಲ್ಲಿ ಇದ್ದವರನ್ನು ಗುರುತಿಸಿ ಕ್ವಾರಂಟೈನ್‌ಗೆ ಒಳಪಡಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡ ಕಾರಣ ಸೋಂಕು ಹರಡುವುದನ್ನು ತಡೆಯುವಲ್ಲಿ ಜಿಲ್ಲಾಡಳಿತ ಯಶಸ್ವಿಯಾಗಿದೆ. ಈ ಬಗ್ಗೆ ಕೇಂದ್ರ ಸರಕಾರ ಪ್ರಶಂಸೆ ವ್ಯಕ್ತಪಡಿಸಿದೆ. ಜಿಲ್ಲೆಯ ಗಡಿಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ಕೈಗೊಂಡು ಸರಕು ಸಾಗಾಣಿಕೆ ಮತ್ತು ತುರ್ತು ವೈದ್ಯಕೀಯ ಕಾರಣ ಹೊರತು ಪಡಿಸಿ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿದ್ದರಿಂದ ಹೊರಜಿಲ್ಲೆಗಳಿಂದ ಸೋಂಕು ಹರಡುವುದನ್ನೂ ತಪ್ಪಿಸಲಾಗಿದೆ ಎಂದು ತಿಳಿಸಿದರು.

ಕಟ್ಟುನಿಟ್ಟಿನ ಕ್ರಮ
ನಗರದ ಒಳಗೂ ದಿನನಿತ್ಯದ ವಸ್ತುಗಳ ಖರೀದಿಗೆ ಸಾರ್ವಜನಿಕರಿಗೆ ಸಮಯ ನಿಗದಿಪಡಿಸಿ ಖರೀದಿಯ ವೇಳೆ ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದ್ದು, ಅನಗತ್ಯ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಜಿಲ್ಲೆಯಲ್ಲಿ ಅಗತ್ಯ ವಸ್ತುಗಳ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಕಾರ್ಮಿಕರಿಗೆ, ನಿರಾಶ್ರಿತರಿಗೆ ಮತ್ತು ನಿರ್ಗತಿಕರಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಸಂಕಷ್ಟದಲ್ಲಿರುವ ಆಟೋ ಚಾಲಕರಿಗೆ ಆಹಾರದ ಕಿಟ್‌ಗಳನ್ನು ವಿತರಿಸಲಾಗುತ್ತಿದೆ. ಜಿಲ್ಲೆ ಕೊರೊನಾ ಮುಕ್ತವಾಗಲು ಲಾಕ್‌ಡೌನ್‌ ಅವಧಿ ಮುಗಿಯುವವರೆಗೂ ಜಿಲ್ಲಾಡಳಿತದ ಸೂಚನೆಗಳನ್ನು ಪಾಲಿಸುವ ಮೂಲಕ ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next