Advertisement
ಇದಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಮುಖ್ಯಮಂತ್ರಿಗಳು ಅಭಿನಂದಿಸಿದ್ದಾರೆ.
Related Articles
Advertisement
2.83 ಲಕ್ಷ ಕೋಟಿ ದೊಡ್ಡ ಬಜೆಟ್. ಕೃಷಿಗೆ ಆದ್ಯತೆಯನ್ನು ಎತ್ತಿ ತೋರಿಸಲಾಗಿದೆ.
ಕ್ಷಯ ರೋಗ ನಿವಾರಣೆ, ಜನ ಔಷಧಿ ಕೇಂದ್ರಗಳ ವಿಸ್ತರಣೆ, ಆರೋಗ್ಯ ಸೇವೆ ಸುಧಾರಣೆಗೆ ಆದ್ಯತೆ, ವೈದ್ಯಕೀಯ ಶಿಕ್ಷಣಕ್ಕೆ ಒತ್ತು ನೀಡಿರುವುದು ಶ್ಲಾಘನೀಯ.
ಶಿಕ್ಷಣ ಕ್ಷೇತ್ರದಲ್ಲಿ ವಿದೇಶಿ ಬಂಡವಾಳ ಹೂಡಿಕೆ ಹಾಗೂ ವಿದೇಶಿ ಸಾಲ ಪಡೆಯಲು ಅನುಮತಿ ದೊರೆತಿರುವುದು ರಾಜ್ಯದ ವಿಶ್ವವಿದ್ಯಾಲಯಗಳಿಗೆ ಬಹಳ ಅನುಕೂಲವಾಗಲಿದೆ. ಅಲ್ಲದೆ ಆನ್‍ಲೈನ್ ಶಿಕ್ಷಣ ವ್ಯವಸ್ಥೆಯನ್ನು ಘೋಷಿಸಿರುವುದು ಒಂದು ಮಹತ್ವಪೂರ್ಣ ಬೆಳವಣಿಗೆಯಾಗಿದೆ.ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗಾವಕಾಶ ಸೃಜನೆಗೆ ಪೂರಕ ಆಯವ್ಯಯ ಇದಾಗಿದ್ದು, ಮಾನವ ಸಂಪನ್ಮೂಲ ಬಳಕೆಗೆ ಉತ್ತೇಜನಕಾರಿಯಾಗಿದೆ. ಉತ್ಪಾದನಾ ವಲಯ, ರಫ್ತಿಗೆ ಉತ್ತೇಜನ ನೀಡುವ ಮೂಲಕ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲಾಗಿದೆ. ಮೂಲಸೌಕರ್ಯ ಅಭಿವೃದ್ಧಿಗೆ 1 ಲಕ್ಷ ಕೋಟಿ ರೂ. ಒದಗಿಸಿರುವುದು ಹೂಡಿಕೆದಾರರಿಗೆ ಉತ್ತಮ ಸಂದೇಶ ನೀಡಿದೆ. 18600 ಕೋಟಿ ರೂ. ಅಂದಾಜು ವೆಚ್ಚದ ಬೆಂಗಳೂರು ಸಬರ್ಬನ್ ರೈಲಿಗೆ ಅನುಮೋದನೆ ನೀಡಿದ್ದು. ಭಾರತ ಸರ್ಕಾರದ ಶೇ. 20 ಪಾಲು, ರಾಜ್ಯ ಸರ್ಕಾರದ ಶೇ.20 ಪಾಲು ಹಾಗೂ ಶೇ. 60 ರ ಬಾಹ್ಯ ನೆರವಿನ ಮೂಲಕ ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಲಾಗಿದ್ದು, ರಾಜಧಾನಿಯ ಸಂಚಾರ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ಬಹಳ ಅನುಕೂಲವಾಗಿದೆ. ಆದಾಯ ತೆರಿಗೆ ಹಾಗೂ ಕಾರ್ಪೊರೇಟ್ ತೆರಿಗೆ ಇಳಿಕೆ, ತೆರಿಗೆದಾರರಿಗೆ ಕಿರುಕುಳ ತಡೆಯುವ ನಿಟ್ಟಿನಲ್ಲಿ “tax payers charter” ಕೇಂದ್ರದ ಮಹತ್ವಪೂರ್ಣ ಕ್ರಮಗಳಾಗಿವೆ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟಿದ್ದಾರೆ. ರಾಷ್ಟ್ರೀಯ ನೇಮಕಾತಿ ಸಂಸ್ಥೆಯನ್ನು ಪ್ರಾರಂಭಿಸುವ ಮೂಲಕ ನಾನ್ ಗಜೆಟೆಡ್ ಹುದ್ದೆಗಳ ನೇಮಕಾತಿಯನ್ನು ಸರಳಗೊಳಿಸುವ ಕೇಂದ್ರದ ತೀರ್ಮಾನವೂ ಸ್ವಾಗತಾರ್ಹ” ಎಂದು ಅವರು ಬಣ್ಣಿಸಿದ್ದಾರೆ.