Advertisement

3 ಲಕ್ಷ ರೈಲ್ವೆ ಖಾಲಿ ಹುದ್ದೆ ಭರ್ತಿಗೆ ಕೇಂದ್ರ ವಿಳಂಬ 

09:12 AM Oct 03, 2017 | |

ಕಲಬುರಗಿ: “ರೈಲ್ವೆ ಇಲಾಖೆಯಲ್ಲಿ ಖಾಲಿಯಿರುವ 3 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲು ಕೇಂದ್ರ ಸರ್ಕಾರ ದುರುದ್ದೇಶದಿಂದಲೇ ವಿಳಂಬ ಧೋರಣೆ ತೋರುತ್ತಿದೆ’ ಎಂದು ಲೋಕಸಭೆ ಕಾಂಗ್ರೆಸ್‌ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು.

Advertisement

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಖಾಲಿ ಇರುವ ಎಲ್ಲ ಹುದ್ದೆಗಳನ್ನು ನೇಮಕ ಮಾಡಿಕೊಂಡರೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ರೋಸ್ಟರ್‌ ಪ್ರಕಾರ ಮೀಸಲಾತಿ ನೀಡಬೇಕಾಗಿದೆ. ಇದರಿಂದ
ಸಬೂಬು ಹೇಳಿ ನೇಮಕಕ್ಕೆ ಹಿಂದೇಟು ಹಾಕಲಾಗುತ್ತಿದೆ’ ಎಂದರು. “ನೇಮಕ ಮಾಡಿಕೊಳ್ಳದಿರುವ ಮೂಲಕ ಪರಿಶಿಷ್ಟ ವರ್ಗ ಹಾಗೂ ಹಿಂದುಳಿದ ವರ್ಗದವರ ನೌಕರಿ ಹಕ್ಕನ್ನು ಸಹ ಕೇಂದ್ರ ಸರ್ಕಾರ ಕಿತ್ತುಕೊಳ್ಳುತ್ತಿದೆ. ರೈಲ್ವೆ ಇಲಾಖೆಯಲ್ಲಿ 3 ಲಕ್ಷದಷ್ಟು ಹುದ್ದೆಗಳು ಖಾಲಿ ಇದ್ದರೂ ತುಂಬದಿರುವುದನ್ನು ನೋಡಿದರೆ ಇದರ ಹಿಂದೆ ವ್ಯವಸ್ಥಿತ ಹುನ್ನಾರವೇ ಅಡಗಿರುವುದು ಕಂಡು ಬರುತ್ತದೆ. ಈಗಲಾದರೂ ಕೇಂದ್ರ ಸರ್ಕಾರ ನೇಮಕ ಪ್ರಕ್ರಿಯೆ ಆರಂಭಿಸಿ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಿಕೊಡಬೇಕು’ ಎಂದರು.

“ಶಾಸಕರಾದ ಡಾ.ಎ.ಬಿ. ಮಾಲಕರೆಡ್ಡಿ ಮತ್ತು ಬಾಬುರಾವ್‌ ಚಿಂಚನಸೂರ ಕಾಂಗ್ರೆಸ್‌ ತೊರೆಯುತ್ತಾರೆ ಎಂಬುದು ವದಂತಿ. ಯಾವುದೇ ಕಾರಣಕ್ಕೂ ಅವರು ಪಕ್ಷ ತೊರೆಯುವುದಿಲ್ಲ. ಮಂತ್ರಿ ಸ್ಥಾನ ಸಿಗದಿರುವುದಕ್ಕೆ ಅವರು ಅಸಮಾಧಾನಗೊಂಡಿರುವುದು
ನಿಜ. ಅದರೆ, ಪಕ್ಷ ಬಿಡುವ ಕೆಲಸ ಮಾಡಲ್ಲ’ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next