Advertisement
ಕೇಂದ್ರೀಯ ಜಲ ಆಯುಕ್ತಾಲಯದ ನಿರ್ದೇಶಕರಾದ ವಿ.ಅಶೋಕ್ ಕುಮಾರ್, ಎಂ.ಎನ್.ಸಿ.ಎಫ್.ಸಿ ಕೇಂದ್ರ ಹಾಗೂ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಕಿರಣ್ ಚೌದರಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧೀನ ಕಾರ್ಯದರ್ಶಿ ಸಂಗೀತ್ ಕುಮಾರ್ ಹಾಗೂ ರಾಜ್ಯದ ಕಂದಾಯ ಇಲಾಖೆಯ ವಿಪತ್ತು ನಿರ್ವಾಹಣೆಯ ಹಿರಿಯ ಸಮಾಲೋಚಕರಾದ ಡಾ|| ಜಿ.ಎಸ್.ಶ್ರೀನಿವಾಸರೆಡ್ಡಿ ರವರ ನೇತೃತ್ವದಲ್ಲಿ ಕೇಂದ್ರ ಬರ ಅಧ್ಯಯನ ತಂಡವು ಮೊದಲಿಗೆ ಜಿಲ್ಲಾಡಳಿತ ಭವನಕ್ಕೆ ಭೇಟಿ ನೀಡಿ ಜಿಲ್ಲೆಯ ಬರ ಪರಿಸ್ಥಿತಿ ಛಾಯಾಚಿತ್ರಗಳನ್ನು ವೀಕ್ಷಿಸಿ ಬಳಿಕ ಜಿಲ್ಲಾಡಳಿತದಿಂದ ಮಾಹಿತಿ ಸಂಗ್ರಹಿಸಿ ಬರ ಪರಿಸ್ಥಿತಿಯನ್ನು ಅವಲೋಕಿಸಿತು.
ಬೆಳಿಗ್ಗೆ 10:10 ರಿಂದ 10:20 ಗಂಟೆಯವರೆಗೆ ಚಿಕ್ಕಬಳ್ಳಾಪುರ ತಾಲ್ಲೂಕಿನ ಚೊಕ್ಕಹಳ್ಳಿ ಗ್ರಾಮ, ಬೆಳಿಗ್ಗೆ 10:50 ರಿಂದ 11:00 ಗಂಟೆಯವರೆಗೆ ಬಂಡಮನಹಳ್ಳಿ ಗ್ರಾಮ ನಂತರ ಬೆಳಿಗ್ಗೆ 11:05 ರಿಂದ 11:15 ಗಂಟೆಯವರೆಗೆ ದೊಡ್ಡೇಗಾನಹಳ್ಳಿ ಗ್ರಾಮದ ರೈತರ ಜಮೀನುಗಳಿಗೆ ಭೇಟಿ ನೀಡಲಿದ್ದಾರೆ. ಆ ನಂತರ ಬೆಳಿಗ್ಗೆ 11:35 ರಿಂದ 11:45 ಗಂಟೆಯವರೆಗೆ ಗೌರಿಬಿದನೂರು ತಾಲ್ಲೂಕಿನ ಜಕ್ಕೇನಹಳ್ಳಿ ಗ್ರಾಮ ಮತ್ತು ಬೆಳಿಗ್ಗೆ 11:55 ರಿಂದ ಮಧ್ಯಾಹ್ನ 12:10 ಗಂಟೆಯವರೆಗೆ ಗಂಗಸಂದ್ರ ಗ್ರಾಮ ಹಾಗೂ ಮಧ್ಯಾಹ್ನ 12:15 ರಿಂದ 12:30 ರವರೆಗೆ ಕಡಬೂರು ಗ್ರಾಮದ ರೈತರ ಜಮೀನುಗಳಿಗೆ ಭೇಟಿ ನೀಡಲಿದ್ದಾರೆ.
Related Articles
Advertisement
2023-24 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ 06 ತಾಲ್ಲೂಕುಗಳಿಗೆ ಶೇ.50% ಹೆಚ್ಚು ಬೆಳೆ ನಷ್ಟವಾಗಿದ್ದು, ಈ ಹಿನ್ನೆಲೆಯಲ್ಲಿ ಮುಂದಿನ 06 ತಿಂಗಳ ಅವಧಿಗೆ ಜಿಲ್ಲೆಯ 06 ತಾಲ್ಲೂಕುಗಳನ್ನು ತೀವ್ರ ಬರಪೀಡಿತ ತಾಲ್ಲೂಕುಗಳೆಂದು ಸರ್ಕಾರ ಘೋಷಿಸಿದೆ.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಪಂ ಸಿಇಒ ಪ್ರಕಾಶ ನಿಟ್ಟಾಲಿ, ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಜಪಂ ಉಪ ಕಾರ್ಯದರ್ಶಿ ಡಾ.ಎನ್.ಭಾಸ್ಕರ್ ಸೇರಿದಂತೆ ಕೃಷಿ, ತೋಟಗಾರಿಕೆ ಇಲಾಖೆ ಹಿರಿಯ ಅಧಿಕಾರಿಗಳು ಇದ್ದರು.
ಇದನ್ನೂ ಓದಿ: World Cup: ಜ್ವರದಿಂದ ಬಳಲುತ್ತಿರುವ ಗಿಲ್: ಆಸೀಸ್ ವಿರುದ್ಧದ ಪಂದ್ಯದಲ್ಲಿ ಆಡುವುದು ಅನುಮಾನ!