Advertisement
ನಗರದ ಹೋಟೆಲ್ ಲಲಿತ್ ಅಶೋಕದಲ್ಲಿ ಮೂರು ದಿನಗಳ “ಬೆಂಗಳೂರು ಇಂಡಿಯಾ ನ್ಯಾನೋ-2020’ರ 11ನೇ ಆವೃತ್ತಿಗೆ ಸೋಮವಾರ ಚಾಲನೆ ನೀಡಿ ಮಾತನಾಡಿದ ಅವರು, ನ್ಯಾನೋ ತಂತ್ರಜ್ಞಾನ ಅಭಿವೃದ್ಧಿ ಸರ್ಕಾರದ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಮೂಲ ಸೌಕರ್ಯ, ಕೌಶಲ್ಯಯುತ ಮಾನವ ಸಂಪನ್ಮೂಲ ಪೂರೈಕೆ ಒಳಗೊಂಡಂತೆ ರಾಜ್ಯದಲ್ಲಿ ಈ ಕ್ಷೇತ್ರದ ಉತ್ತೇಜನಕ್ಕೆ ಪೂರಕ ವಾತಾವರಣ ನಿರ್ಮಿಸಲಾಗುವುದು. ಇದರೊಂದಿಗೆ “ನ್ಯಾನೋ ರಾಜಧಾನಿ’ಯನ್ನಾಗಿ ರೂಪಿಸಲಾಗುವುದು ಎಂದು ಹೇಳಿದರು.
Related Articles
Advertisement
ಇದೇ ವೇಳೆ ನ್ಯಾನೋ ತಂತ್ರಜ್ಞಾನದ ಉತ್ತಮ ಸಂಶೋಧನೆಗಾಗಿ ಐಐಎಸ್ಸಿ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪಿ.ಎಸ್.ಅನಿಲ್ ಕುಮಾರ್ ಅವರಿಗೆ “ಪ್ರೊ.ಸಿ.ಎನ್.ಆರ್.ರಾವ್ ಬೆಂಗಳೂರು ಇಂಡಿ ಯಾ ನ್ಯಾನೋ ವಿಜ್ಞಾನ ಪ್ರಶಸ್ತಿ 2020′ ಪ್ರದಾನ ಮಾಡಲಾಯಿತು. ಸ್ಟಾನ್‌ಫೋರ್ಡ್ ವಿಶ್ವವಿದ್ಯಾಲ ಯದ ಪ್ರಾಧ್ಯಾಪಕ ರೋಜರ್ ಹೋವೆ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣ ರೆಡ್ಡಿ, ಐಐಎಸ್ಸಿ ಬೆಂಗಳೂರಿನ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಅಜಯ್ ಕುಮಾರ್ ಸೂದ್, ಶಾಸಕ ರಿಜ್ವಾನ್ ಅರ್ಷದ್, ಕೆ-ಸ್ಟೆಪ್ಸ್ ಎಂ.ಡಿ ಡಾ.ಎಚ್.ಹೊನ್ನೇಗೌಡ ಉಪಸ್ಥಿತರಿದ್ದರು.
ವಿಜ್ಞಾನ ಮತ್ತು ತಂತ್ರಜ್ಞಾನ ನೀತಿ ಜಾರಿ ಶೀಘ್ರ: ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಾತನಾಡಿ, ರಾಜ್ಯ ಸರ್ಕಾರವು ಶೀಘ್ರ ವಿಜ್ಞಾನ ಮತ್ತು ತಂತ್ರಜ್ಞಾನ ನೀತಿ ಜಾರಿಗೆ ತರಲಿದೆ. ಅದರಲ್ಲಿ ಸಂಶೋಧನೆ ಹಾಗೂ ಅಭಿವೃದ್ಧಿಗೆ ಪೂರಕವಾದ ಹಲವಾರು ಅಂಶಗಳು ಇರಲಿವೆ. ನೀತಿ-ನಿರೂಪಣೆಯಲ್ಲಿ ಪ್ರೊ.ಸಿ.ಎನ್.ಆರ್.ರಾವ್ ಮಾರ್ಗದರ್ಶನದ ವಿಜನ್ ಗ್ರೂಪ್ ನೆರವಾಗಲಿದೆ. ನ್ಯಾನೊ ತಂತ್ರಜ್ಞಾನದ ಹಬ್ ಮಾಡಲು ಐಐಎಸ್ಸಿ, ಐಐಟಿ ಸೇರಿ ಹಲವು ಪ್ರತಿಷ್ಠಿತ ಸಂಶೋಧನಾ ಸಂಸ್ಥೆಗಳ ನೆರವು ಪಡೆಯಲಾಗುವುದು ಎಂದರು.
ದೇವನಹಳ್ಳಿ ಬಳಿ ಪಾರ್ಕ್?: ಕಾರ್ಯಕ್ರಮದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಮುಖ್ಯಮಂತ್ರಿ ಗಳು, ನಗರದ ಬಳ್ಳಾರಿ ರಸ್ತೆಯಲ್ಲಿ ನ್ಯಾನೊ ಟೆಕ್ ಪಾರ್ಕ್‌ಗೆ ಜಾಗ ಗುರುತಿಸಲಾಗಿದೆ ಎಂದು ಹೇಳಿದರು. ವಿಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆ ಮೂಲಗಳ ಪ್ರಕಾರ ದೇವನಹಳ್ಳಿ ಬಳಿ 15 ಎಕರೆ ಜಾಗ ಇದ್ದು, ಅಲ್ಲಿ ಪಾರ್ಕ್ ತಲೆಯೆತ್ತಲಿದೆ.