Advertisement
ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬರ ಪರಿಸ್ಥಿತಿ ನಿರ್ವಹಣೆಗೆ ಕೇಂದ್ರ ನಯಾಪೈಸೆ ಅನುದಾನ ನೀಡಿಲ್ಲ. ಸಂಸದರೂ ಅನುದಾನ ಕೊಡಿಸಲು ಪ್ರಯತ್ನಿಸಿಲ್ಲ. ವಾರ್ಷಿಕವಾಗಿ 4 ಲಕ್ಷ ಕೋಟಿ ರೂ. ತೆರಿಗೆಯನ್ನು ಕರ್ನಾಟಕದಿಂದ ಕೇಂದ್ರಕ್ಕೆ ನೀಡುತ್ತಿದ್ದು, ನಮಗೆ ಮರಳಿ 50 ಸಾವಿರ ಕೋಟಿ ರೂ. ನೀಡುತ್ತಿದೆ ಎಂದು ಆರೋಪಿಸಿದರು.
Related Articles
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮರ್ಥರಿದ್ದು ಭ್ರಷ್ಟಾಚಾರರಹಿತ ಆಡಳಿತ ನೀಡುತ್ತಿದ್ದಾರೆ. ಉಪ ಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಊಹಾ ಪೋಹ ಹೇಳಿಕೆ ಗೆ ಉತ್ತರಿಸಲಾರೆ. ಸಿದ್ದರಾ ಮಯ್ಯ ಅವರಿಗೆ ಹೈಕಮಾಂಡ್ ಬೆಂಬಲ ವಿದ್ದು, ರಾಜ್ಯದ ಎಲ್ಲ ಕ್ಷೇತ್ರಗಳನ್ನೂ ಗೆಲ್ಲಲು ಪ್ರಯತ್ನಿಸುತ್ತಿದ್ದೇವೆ ಎಂದರು ಜಾರ್ಜ್.
Advertisement
ವಿದ್ಯುತ್ ಕೊರತೆ ಇಲ್ಲತೀವ್ರ ಬರಗಾಲವಿದ್ದರೂ ವಿದ್ಯುತ್ ಕಡಿತಗೊಳಿಸದೇ ಬೇರೆಡೆಯಿಂದ ವಿದ್ಯುತ್ ಖರೀದಿಸಿ ಪೂರೈಸ ಲಾಗುತ್ತಿದೆ. 3000 ಮೆ.ವ್ಯಾಟ್‌ಸೋಲಾರ್ ವಿದ್ಯುತ್ ಉತ್ಪಾದನೆಗೆ ಕ್ರಮ ವಹಿಸಲಾಗಿದೆ. ಮಂಗಳೂರಿನಲ್ಲಿ ಗ್ರೀನ್ ಹೈಡ್ರೋ ಜನ್ ಯೋಜನೆಯ ಅನುಷ್ಠಾನಕ್ಕೂ ಸಿದ್ಧತೆ ನಡೆಸುತ್ತಿದ್ದೇವೆ ಎಂದರು ಸಚಿವರು.