Advertisement

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

01:27 AM Nov 23, 2024 | Team Udayavani |

ಮೈಸೂರು: ಮೊದಲಿಗೆ ರಾಜ್ಯದ ಜನರಿಗೆ 7 ಕೆಜಿ ಅಕ್ಕಿ ಕೊಟ್ಟವರೇ ನಾವು. ಇದನ್ನು 5 ಕೆಜಿಗೆ ಇಳಿಸಿದ್ದು ಬಿ.ಎಸ್‌.ಯಡಿಯೂರಪ್ಪ. ಈಗ ಯಡಿಯೂರಪ್ಪ ಅವರ ಮಗ ವಿಜಯೇಂದ್ರನಿಗೆ ಈ ಬಗ್ಗೆ ಮಾತಾಡಲು ಯಾವ ನೈತಿಕತೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

Advertisement

ನಗರದ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಅವರು ಮಾತನಾಡಿ, ಯಡಿಯೂರಪ್ಪ ಅಕ್ಕಿ ಪ್ರಮಾಣವನ್ನು ಐದು ಕೆಜಿಗೆ ಇಳಿಸಿದ್ದನ್ನು ಹತ್ತು ಕೆಜಿಗೆ ಏರಿಸಿದ್ದು ನಾವು. ಈ ಸತ್ಯ ರಾಜ್ಯದ ಜನರಿಗೆ ಗೊತ್ತಿದೆ ಎಂದರು. ಕೇಂದ್ರ ಸರಕಾರವೇ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಗೊಳಿಸಿದೆ. ಆಹಾರ ಭದ್ರತಾ ಕಾಯ್ದೆಯನ್ನು ಜಾರಿ ಮಾಡಿದ್ದು ಪ್ರಧಾನಿ ಮನಮೋಹನ್‌ ಸಿಂಗ್‌. ಇದನ್ನು ಬಿಜೆಪಿ ವಿರೋಧಿಸಿತ್ತು. ಹಿಂದಿನ ಕೇಂದ್ರ ಸಚಿವರಾಗಿದ್ದ ಮುರಳಿ ಮನೋಹರ ಜೋಶಿಯವರು ಆಹಾರ ಭದ್ರತಾ ಕಾಯ್ದೆಯನ್ನು ವಿರೋಧಿಸಿದ್ದರು. ಈಗ ಅನ್ಯಾಯವಾಗಿದೆ ಅಂತ ಸುಳ್ಳು ಹೇಳಿ ಬಿಜೆಪಿಯವರು ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿ¨ªಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರಕಾರಿ ನೌಕರರಿಗೂ ಬಿಪಿಎಲ್‌ ಕಾರ್ಡ್‌ ಕೊಡಬೇಕಾ? ಆದಾಯ ತೆರಿಗೆ ಪಾವತಿಸುವವರಿಗೂ ಬಿಪಿಎಲ್‌ ಕಾರ್ಡ್‌ ಕೊಡಬೇಕಾ? ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಈ ಸಂಬಂಧ ವಿಪಕ್ಷದ ನಾಯಕ ಆರ್‌. ಅಶೋಕ್‌ ಫೋಟೋ ತೆಗೆಸಿಕೊಂಡಿದ್ದೇ ಕೊಂಡಿದ್ದು ಎಂದು ಲೇವಡಿ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next