Advertisement

ಬಜೆಟ್‌ನಲ್ಲಿ ಈಕ್ವಿಟಿ ಮೇಲಿನ ತೆರಿಗೆ ಪ್ರಮಾಣ ಕಡಿತ?

09:39 AM Dec 19, 2019 | Team Udayavani |

ಹೊಸದಿಲ್ಲಿ: ದೇಶದ ಮಧ್ಯಮ ವರ್ಗ ಮತ್ತು ಸಂಬಳದಾರರು ಬಹುಕಾಲದಿಂದ ನಿರೀಕ್ಷೆ ಮಾಡುತ್ತಿದ್ದ ವೈಯಕ್ತಿಕ ಆದಾಯ ತೆರಿಗೆ ಕಡಿತದ ಘೋಷಣೆ ಬಜೆಟ್‌ನಲ್ಲಿ ಹೊರ ಬೀಳುವ ಸಾಧ್ಯತೆ ಇದೆ. ಇದರ ಜತೆಗೆ ಈಕ್ವಿಟಿ ಹೂಡಿಕೆಗಳ ಮೇಲೆ ವಿಧಿಸಲಾಗುತ್ತಿರುವ ತೆರಿಗೆ ಪ್ರಮಾಣವೂ ಕಡಿಮೆಯಾಗುವ ಸಾಧ್ಯತೆಗಳು ಇವೆ. ದೇಶದ ಅರ್ಥ ವ್ಯವಸ್ಥೆಯ ಬೆಳವಣಿಗೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಇಂಥ ಕ್ರಮಗಳನ್ನು ಕೈಗೊಳ್ಳಲಾಗುವ ಬಗ್ಗೆ ಯೋಚನೆಗಳು ಇವೆ ಎಂದು ಕೇಂದ್ರ ಸರಕಾರದ ಹಿರಿಯ ಅಧಿಕಾರಿಗಳು ಹೇಳಿದ್ದಾರೆ.

Advertisement

ದೇಶದ ಅರ್ಥ ವ್ಯವಸ್ಥೆಯ ಪ್ರಗತಿ ದರ ಆರು ವರ್ಷಗಳಿಗೆ ಹೋಲಿಕೆ ಮಾಡಿದರೆ ಪ್ರಸಕ್ತ ವರ್ಷದ ಜುಲೈ-ಸೆಪ್ಟೆಂಬರ್‌ ಅವಧಿಯಲ್ಲಿ ಶೇ.4.5ಕ್ಕೆ ತಲುಪಿತ್ತು. ಇದರ ಜತೆಗೆ ಕೇಂದ್ರ ಸರಕಾರಕ್ಕೆ ವೈಯಕ್ತಿಕ ಆದಾಯ ತೆರಿಗೆ ಪ್ರಮಾಣ ಕಡಿಮೆ ಮಾಡಬೇಕು ಎಂಬ ಬಗ್ಗೆ ಮನವಿಗಳೂ ಸಲ್ಲಿಕೆಯಾಗಿದ್ದವು. ಆದಾಯ ತೆರಿಗೆಯನ್ನು ಸಂಪೂರ್ಣವಾಗಿ ರದ್ದು ಮಾಡಬೇಕು ಎಂಬ ಸಲಹೆಯೂ ಇದೆ. ಈ ಬಗ್ಗೆ ಪ್ರಧಾನ ಮಂತ್ರಿಗಳ ಕಚೇರಿ ಮಟ್ಟದಲ್ಲಿಯೂ ಕೂಡ ಚರ್ಚೆಯಾಗಿದೆ ಎಂದು ಹಿರಿಯ ಅಧಿಕಾರಿ ಹೇಳಿಕೊಂಡಿದ್ದಾರೆ.

ಫೆಡರೇಷನ್‌ ಆಫ್ ಇಂಡಿಯನ್‌ ಛೇಂಬರ್ಸ್‌ ಆಫ್ ಕಾಮರ್ಸ್‌ ಆ್ಯಂಡ್‌ ಇಂಡಸ್ಟ್ರಿ ಕೇಂದ್ರಕ್ಕೆ ಸಲ್ಲಿಸಿರುವ ಮನವಿಯಲ್ಲಿ ಆದಾಯ ತೆರಿಗೆ ಪ್ರಮಾಣ ಕಡಿಮೆ ಮಾಡಿದರೆ ಅರ್ಥ ವ್ಯವಸ್ಥೆ ಪುಟಿದೇಳಲು ನೆರವಾಗಲಿದೆ. ಜತೆಗೆ ವಿವಿಧ ರೀತಿಯ ಸರಕು ಮತ್ತು ಸೇವೆಗಳಿಗೆ ಹೆಚ್ಚು ಬೇಡಿಕೆ ಬರುತ್ತದೆ ಎಂದು ಪ್ರತಿಪಾದಿಸಿದೆ. ಇವನ್ನು ಸರಕಾರ ಪರಿಗಣಿಸಿ ಬಜೆಟ್‌ನಲ್ಲಿ ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next