Advertisement

ಕೋವಿಡ್ ಸೋಂಕು: ದೇಶಾದ್ಯಂತ 20 ಲಕ್ಷ ಸುರಕ್ಷಾ ಮಳಿಗೆ ತೆರೆಯಲು ಕೇಂದ್ರದ ಚಿಂತನೆ

03:19 AM Apr 13, 2020 | Hari Prasad |

ನವದೆಹಲಿ: ಕೋವಿಡ್ ಸೋಂಕು ಹರಡುವಿಕೆ ತಡೆಗೆ ನಿರ್ಬಂಧಗಳನ್ನು ವಿಸ್ತರಿಸುತ್ತಿರುವ ಕಾರಣ ಜನರು ಅಗತ್ಯ ವಸ್ತುಗಳಿಗೆ ಪರದಾಡುವುದನ್ನು ತಪ್ಪಿಸಲು ದೇಶಾದ್ಯಂತ 20 ಲಕ್ಷ ಸುರಕ್ಷಾ ಮಳಿಗೆಗಳನ್ನು ತೆರೆಯಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ, 50ಕ್ಕೂ ಹೆಚ್ಚು ಕಂಪನಿಗಳ ಜೊತೆ ಮಾತುಕತೆ ನಡೆಸಿದೆ.

Advertisement

“ದೇಶದಲ್ಲಿ ಕಿರಾಣಿ ಅಂಗಡಿಗಳ ರೀತಿಯಲ್ಲಿ ಸುರಕ್ಷಾ ಮಳಿಗೆಗಳನ್ನು ತೆರೆದು ಕಟ್ಟುನಿಟ್ಟಿನ ಸುರಕ್ಷತಾ ಕ್ರಮಗಳೊಂದಿಗೆ ಜನರಿಗೆ ಅಗತ್ಯ ವಸ್ತುಗಳನ್ನು ಪೂರೈಸಲಾಗುವುದು. ಈ ಕುರಿತು ನಿಯಮಾವಳಿಗಳನ್ನು ರೂಪಿಸುತ್ತಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗುವುದು. ಪ್ರತಿಯೊಬ್ಬರಿಗೂ ಸ್ಯಾನಿಟೈಸರ್‌ ಮೂಲಕ ಕೈ ತೊಳೆದು ಬರುವಂತೆ ಸೂಚಿಸಲಾಗುವುದು. ಅಂಗಡಿ ಬಳಿ ಜನರು ಮುಟ್ಟುವ, ಒಡಾಡುವ ಸ್ಥಳಗಳನ್ನು ದಿನಕ್ಕೆ ಎರಡು ಬಾರಿ ಸ್ವಚ್ಛಗೊಳಿಸಲಾಗುವುದು.

ಸಿಬ್ಬಂದಿ ಕೂಡ ಮಾಸ್ಕ್, ಗ್ಲೌಸ್‌ ಬಳಸುವಂಥ ವ್ಯವಸ್ಥೆ ಇರಲಿದೆ. ಸಾರ್ವಜನಿಕ ಸಹಭಾಗಿತ್ವದಲ್ಲಿ ಸುರಕ್ಷತಾ ಸ್ಟೋರ್‌ ಸ್ಥಾಪಿಸಲಾಗುವುದು. ಈ ಕುರಿತು ಅಗತ್ಯ ವಸ್ತುಗಳ ಸರಬರಾಜು ಕಂಪನಿಗಳೊಂದಿಗೆ ಮಾತುಕತೆ ನಡೆಸಲಾಗಿದೆ” ಎಂದು ಆಹಾರ ಹಾಗೂ ನಾಗರಿಕ ಸರಬರಾಜು ಸಚಿವಾಲಯದ ಕಾರ್ಯದರ್ಶಿ ಪವನ್‌ ಕುಮಾರ್‌ ಅಗರ್‌ವಾಲ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next