Advertisement

Karnataka ರಾಜ್ಯವನ್ನು ಟಾರ್ಗೆಟ್‌ ಮಾಡುತ್ತಿರುವ ಕೇಂದ್ರ ಸರ್ಕಾರ: ಸಚಿವ ರಾಮಲಿಂಗಾರೆಡ್ಡಿ

08:42 PM Nov 08, 2023 | Team Udayavani |

ರಾಮನಗರ: ಕೇಂದ್ರ ಸರ್ಕಾರದ ನಡವಳಿಕೆಯನ್ನು ನೋಡಿದರೆ ನಮ್ಮ ರಾಜ್ಯವನ್ನು ಟಾರ್ಗೆಟ್‌ ಮಾಡುತ್ತಿದೆ ಎಂಬ ಭಾವನೆ ಮೂಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಆರೋಪಿಸಿದರು.

Advertisement

ವಿವಿಧೆಡೆ ಬರ ನಿರ್ವಹಣೆ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿ, ಅತಿ ಹೆಚ್ಚು ತೆರಿಗೆ ಕಟ್ಟುವ ರಾಜ್ಯ ಕರ್ನಾಟಕ. ಆದರೆ ನಮಗೆ ಪರಿಹಾರ ಕೊಡುವಾಗ ಕೇಂದ್ರ ಮಲತಾಯಿ ಧೋರಣೆ ತೋರುತ್ತಿದೆ. ರಾಜ್ಯದಲ್ಲಿ 25 ಬಿಜೆಪಿ ಸಂಸದರಿ¨ªಾರೆ. ಮೋದಿ ಬಳಿ ಕುಳಿತು ರಾಜ್ಯದ ವಾಸ್ತವ ಮನವರಿಕೆ ಮಾಡುವ ಧೈರ್ಯ ಯಾರಿಗೂ ಇಲ್ಲ. ಮೋದಿ ಬಳಿ ದೇವರಿಗೆ ನಮಸ್ಕಾರ ಹಾಕಿದ ರೀತಿ ನಮಸ್ಕಾರ ಹಾಕಿ ಬರ್ತಾರೆ ಅಷ್ಟೇ. ರಾಜ್ಯದ ಜನರು, ರೈತರ ಬಗ್ಗೆ ಬಿಜೆಪಿಯವರಿಗೆ ಕಾಳಜಿ ಇಲ್ಲ. ಅವರಿಂದ ಏನನ್ನೂ ನಿರೀಕ್ಷೆ ಮಾಡಲು ಸಾಧ್ಯವಿಲ್ಲ ಎಂದು ಬಿಜೆಪಿ ಸಂಸದರ ವಿರುದ್ಧ ಟೀಕಾಪ್ರಹಾರ ನಡೆಸಿದರು.

ನಮ್ಮ ದೇಶದ ಸಂಪತ್ತು ಲೂಟಿ ಮಾಡಿ ಉದ್ದಿಮೆದಾರರ ಸಾಲ ಮನ್ನಾ ಮಾಡಿದ್ದು ಇದೇ ಮೋದಿ ಎಂಬುದನ್ನು ಅವರು ಮರೆತಿದ್ದಾರೆ. ಕಳೆದ 9 ವರ್ಷಗಳಲ್ಲಿ ಇವರು ದೇಶದ ಮೇಲೆ ಸಾಲದ ಹೊರೆ ಹೊರೆಸಿದ್ದಾರೆ. ನಮ್ಮ ಸರ್ಕಾರದ ಬಗ್ಗೆ ಮಾತನಾಡುವ ಮುನ್ನ ಹಿಂದೆ ಇದ್ದ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾತನಾಡಲಿ ಎಂದು ಪ್ರಧಾನಿ ಹೇಳಿಕೆಗೆ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next