Advertisement
18177.44 ಕೋಟಿ ರೂ. ಬರ ಪರಿಹಾರಕ್ಕಾಗಿ ಕರ್ನಾಟಕದಿಂದ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ. 42 ಸಾವಿರ ಕೋಟಿ ರೂ. ಜಿ.ಎಸ್.ಟಿ.ಪಾಲು ಸೇರಿ ಇತರ ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಬಾಕಿ ಹಣವನ್ನು ಕೂಡಲೇ ಬಿಡುಗಡೆ ಮಾಡುವಂತೆ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.
Related Articles
Advertisement
ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಂದಾಯ ಸಚಿವ ಕೃಷ್ಣ ಬೈರೆಗೌಡ ಅವರು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ ಶೀಘ್ರ ಹಣ ಬಿಡುಗಡೆಗೆ ಒತ್ತಾಯಿಸಿದ್ದಾರೆ.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಹಾಗೂ ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ ಮಾತನಾಡಿದ್ದಾರೆ. ಪರಿಹಾರ ಬಿಡುಗಡೆಗೆ ಮನವಿ ಮಾಡಿದ್ದಾರೆ. ಇಷ್ಟಾದರೂ ಕೇಂದ್ರ ಇದುವರೆಗೂ ಬರ ಪರಿಹಾರ ಬಿಡುಗಡ ಮಾಡಿಲ್ಲ. ಇದು ಕೇಂದ್ರ ಸರ್ಕಾರ ನಡೆದುಕೊಳ್ಳುವ ರೀತಿಯೇ? ಎಂದು ಸುರ್ಜೆವಾಲಾ ಕಟುವಾಗಿ ಪ್ರಶ್ನೆ ಮಾಡಿದ್ದಾರೆ.
ಇತರ ಅನುದಾನ ಬಿಡುಗಡೆ ಮಾಡಲಿ
ಕೇವಲ ಬರ ಪರಿಹಾರ ಮಾತ್ರವಲ್ಲ ಜಿಎಸ್ ಟಿಯ ರಾಜ್ಯದ ಪಾಲು, ಅನುದಾನವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡುವುದು ಬಾಕಿ ಇದೆ. ಅಲ್ಲದೆ, 14 ನೇ ಹಣಕಾಸು, 15 ನೇ ಹಣಕಾಸು ಸೇರಿ ಕೇಂದ್ರ ಪುರಸ್ಕೃತ ಯೋಜನೆಗೆ ಬರಬೇಕಾದ ಸುಮಾರು 42 ಸಾವಿರ ಕೋಟಿ ರೂ. ಅನುದಾನ ಬಾಕಿ ಇದೆ. ಆ ಅನುದಾನವನ್ನೂ ಶೀಘ್ರ ಬಿಡುಗಡೆ ಮಾಡಬೇಕು ಎಂದು ಸುರ್ಜೆವಾಲಾ ಒತ್ತಾಯಿಸಿದ್ದಾರೆ.
ಸಂಸದರು ಏನು ಮಾಡುತ್ತಿದ್ದಾರೆ.?
ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆ. ಬೆಳೆ ನಷ್ಟದಿಂದ ಕಂಗಾಲಾಗಿದ್ದಾರೆ. ಸರ್ಕಾರದಿಂದ ಪರಿಹಾರದ, ನೆರವಿನ ನಿರೀಕ್ಷೆಯಲ್ಲಿದ್ದಾರೆ. ರಾಜ್ಯದಿಂದ 26 ಬಿಜೆಪಿಯಿಂದ ಆಯ್ಕೆಯಾದ ಹಾಗೂ ಒಬ್ಬರು ಬಿಜೆಪಿ ಬೆಂಬಲಿತ ಸಂಸದರಿದ್ದಾರೆ. ಈಗ ಅವರು ಏನು ಮಾಡುತ್ತಿದ್ದಾರೆ ಎಂಬುದೇ ಅರ್ಥವಾಗದು. ಜನರ ಮುಂದೆ ಹೇಗೆ ಮುಖ ಹೊತ್ತು ಹೋಗುತ್ತಾರೆ…? ಎಂದು ಸುರ್ಜೆವಾಲಾ ಪ್ರಶ್ನಿಸಿದ್ದಾರೆ.
ಈ ಎಲ್ಲ ಸಂಸದರು ರಾಜಕೀಯ ಮಾಡದೇ ರೈತರ ಹಿತಾಸಕ್ತಿಯ ಪರವಾಗಿ ಕೆಲಸ ಮಾಡಬೇಕು. ಪ್ರಧಾನಿ ಅವರನ್ನು ಭೇಟಿಯಾಗಿ ಅನುದಾನ ಬಿಡುಗಡೆಗೆ ಒತ್ತಡ ಹೇರಬೇಕು ಎಂದು ರಣದೀಪ್ ಸಿಂಗ್ ಸುರ್ಜೆವಾಲಾ ಆಗ್ರಹಿಸಿದ್ದಾರೆ.