Advertisement

ಅ. 2ರಿಂದ ಕೇಂದ್ರದಿಂದ ದೂರುಗಳ ವಿಲೇವಾರಿ

12:21 AM Sep 21, 2021 | Team Udayavani |

ಹೊಸದಿಲ್ಲಿ: ಪ್ರಧಾನಿ ಮೋದಿಯವರು ಪ್ರಸಕ್ತ ವರ್ಷದ ಗಾಂಧಿ ಜಯಂತಿ, ಅ. 2ರಿಂದ ಒಂದು ತಿಂಗಳ ಒಳಗೆ ಕೇಂದ್ರದ ಎಲ್ಲ ಸಚಿವಾಲಯಗಳಲ್ಲಿ ಬಾಕಿ ಉಳಿದಿರುವ ದೂರುಗಳನ್ನು ಇತ್ಯರ್ಥಗೊಳಿಸಲು ಮುಂದಾಗಿದ್ದಾರೆ.

Advertisement

ಸಂಸತ್‌ ಸದಸ್ಯರು, ರಾಜ್ಯ ಸರಕಾರ ಗಳಿಂದ ದೂರು ವಿಲೇವಾರಿ, ಸಂಸದೀಯ ಸಮಿತಿ ಗಳು ನೀಡಿದ ಭರವಸೆಗಳ ಬಾಕಿ ಅನುಷ್ಠಾನ, ಸಾರ್ವಜನಿಕರು ಸಲ್ಲಿಸಿರುವ ದೂರುಗಳನ್ನು ಇತ್ಯರ್ಥ ಗೊಳಿಸಲು ವಿಶೇಷ ಆಂದೋಲನ ನಡೆಸಲು ನಿರ್ಧರಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಕೇಂದ್ರ ಸಂಪುಟ ಕಾರ್ಯದರ್ಶಿ ರಾಜೀವ್‌ ಗೌಬಾ ಎಲ್ಲ ಸಚಿವಾಲಯಗಳ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.  ಆಂದೋಲನವನ್ನು ಯಶಸ್ವಿಗೊಳಿಸಲು ಅಗತ್ಯ ಕ್ರಮಗಳನ್ನುಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.

ಕೇಂದ್ರ ಸರಕಾರದ ಸಿಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಸಚಿವಾಲಯದ ಮೂಲಕ ಸರಕಾರಕ್ಕೆ ಸಲ್ಲಿಕೆಯಾಗುವ ಸಲಹೆ-ದೂರುಗಳನ್ನು ಇತ್ಯರ್ಥಗೊಳಿಸಲಾಗುತ್ತದೆ. ಈ ಉದ್ದೇಶಕ್ಕಾಗಿ ಸೆ. 13ರಿಂದಲೇ ಎಲ್ಲ ಸಚಿವಾಲಯಗಳಲ್ಲಿ ಯಾವ ರೀತಿಯ ದೂರುಗಳನ್ನು ಇತ್ಯರ್ಥಪಡಿಸಬೇಕು ಎಂಬ ಬಗ್ಗೆ ಪರಾಮರ್ಶೆ ನಡೆಯುತ್ತಿದೆ. ಸೆ. 29ರ ವರೆಗೆ ಈ ಪ್ರಕ್ರಿಯೆ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next