Advertisement

ಶಾಲೆಗಳನ್ನು ತೆರೆಯಲು ಕೇಂದ್ರದ ಮಾರ್ಗಸೂಚಿ

12:58 AM Sep 09, 2020 | mahesh |

ಹೊಸದಿಲ್ಲಿ: 9ರಿಂದ 12ನೇ ತರಗತಿಯ ವಿದ್ಯಾರ್ಥಿಗಳು ಇದೇ 21ರಿಂದ ಶಿಕ್ಷಕರ ಮಾರ್ಗದರ್ಶನ ಪಡೆಯುವ ಸಲುವಾಗಿ ಶಾಲೆಗಳಿಗೆ ಸ್ವಇಚ್ಛೆಯಿಂದ ತೆರಳಲು ಈಗಾಗಲೇ ಕೇಂದ್ರ ಸರಕಾರ ಅನುಮತಿ ನೀಡಿದ್ದು, ಮಂಗಳವಾರ ಇದಕ್ಕೆ ಸಂಬಂಧಿಸಿದ ಮಾರ್ಗ ಸೂಚಿಯನ್ನು ಬಿಡುಗಡೆ ಮಾಡಿದೆ.

Advertisement

ತರಗತಿಗಳಲ್ಲಿ ವಿದ್ಯಾರ್ಥಿಗಳು ಕನಿಷ್ಠ 6 ಅಡಿ ಶಾರೀರಿಕ ಅಂತರ ಕಾಪಾಡಿಕೊಳ್ಳಬೇಕು. ಅದೇ ರೀತಿ, ಸಿಬಂದಿ ಕೊಠಡಿ, ಕಚೇರಿಗಳು, ಗ್ರಂಥಾ­ಲಯ, ಕೆಫೆಟೇರಿಯಾಗಳಲ್ಲೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಮುಖ್ಯ. ಶಾಲೆಗಳಲ್ಲಿ ಅಸೆಂಬ್ಲಿ, ಕ್ರೀಡೆ ಮತ್ತಿತರ ಕಾರ್ಯಕ್ರಮ ನಡೆಸುವಂತಿಲ್ಲ. ಕ್ಯಾಂಪಸ್‌ನಲ್ಲಿ ಎಲ್ಲ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವರ್ಗ, ಸಿಬಂದಿ ಮಾಸ್ಕ್ ಧರಿಸುವುದು ಕಡ್ಡಾಯ. ಕಂಟೈನ್ಮೆಂಟ್‌ ವಲಯಗಳಲ್ಲಿರುವ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಶಾಲೆಗೆ ಆಗಮಿಸುವಂತಿಲ್ಲ ಎಂದು ಮಾರ್ಗಸೂಚಿ ಯಲ್ಲಿ ತಿಳಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next