Advertisement
ಗುರುವಾರ ಸುಮಾರು 6 ಗಂಟೆಗಳ ಕಾಲ ಬಂದ್ ಆಗಿದ್ದ ದೆಹಲಿ-ನೊಯ್ಡಾ ಎಕ್ಸ್‌ಪ್ರೆಸ್‌ವೇ ಸಂಜೆ ನಂತರ ಸಹಜ ಸ್ಥಿತಿಗೆ ಮರಳಿತು. ನೋಯ್ಡಾ ಮತ್ತು ಗ್ರೇಟರ್ ನೋಯ್ಡಾ ಪ್ರದೇಶದಲ್ಲಿ ಭೂಸ್ವಾಧೀನಪಡಿಸಿಕೊಂಡ ಜಮೀನಿಗೆ ಪರಿಹಾರ ಹೆಚ್ಚಿಸಬೇಕೆಂದು ಒತ್ತಾಯಿಸಿ ಕಿಸಾನ್ ಮಹಾಪಂಚಾಯತ್ ದೆಹಲಿ ಚಲೋಗೆ ಕರೆ ನೀಡಿತ್ತು. ಇನ್ನೊಂದೆಡೆ, ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ, ರೈತರಿಗೆ ಪಿಂಚಣಿ, ಬೆಳೆ ವಿಮೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪಂಜಾಬ್ ರೈತರು ಮಂಗಳವಾರ “ದೆಹಲಿಗೆ ಟ್ರ್ಯಾಕ್ಟರ್ ಚಲೋ’ ಹಮ್ಮಿಕೊಂಡಿದ್ದಾರೆ.ಚಂಡೀಗಢದಲ್ಲಿ ಪ್ರತಿಭಟನಾನಿರತ ರೈತ ಪ್ರತಿನಿಧಿಗಳನ್ನು ಗುರುವಾರ ಸಂಜೆ ಕೇಂದ್ರ ಕೃಷಿ ಖಾತೆ ಸಹಾಯಕ ಸಚಿವ ಅರ್ಜುನ್ ಮುಂಡಾ, ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ನಿತ್ಯಾನಂದ ರೈ, ಕೇಂದ್ರ ವಾಣಿಜ್ಯ ಸಚಿವ ಪೀಯೂಷ್ ಗೋಯಲ್ ಮತ್ತು ಕೇಂದ್ರ ಸರ್ಕಾರದ ನಿಯೋಗ ಭೇಟಿ ಮಾಡಿ, ಮಾತುಕತೆ ನಡೆಸಿದೆ.