Advertisement

Finance: ಹೊಸ ಪಿಂಚಣಿ ವ್ಯವಸ್ಥೆ ಜಾರಿಗೆ ಕೇಂದ್ರ ಒಲವು?

08:53 PM Jan 10, 2024 | Team Udayavani |

ನವದೆಹಲಿ: ದೇಶದಲ್ಲಿ ಸದ್ಯ ಜಾರಿಯಲ್ಲಿ ಇರುವ ಹೊಸ ಪಿಂಚಣಿ ವ್ಯವಸ್ಥೆ (ಎನ್‌ಪಿಎಸ್‌) ಯನ್ನು ಮುಂದುವರಿಸುವ ಬಗ್ಗೆ ಕೇಂದ್ರ ಸರ್ಕಾರ ಇರಾದೆ ಹೊಂದಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಫೆ.1ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಲಿರುವ ಮಧ್ಯಂತರ ಬಜೆಟ್‌ನಲ್ಲಿ ಈ ಬಗ್ಗೆ ಸ್ಪಷ್ಟ ನಿಲುವು ಪ್ರಕಟ ಆಗುವ ಸಾಧ್ಯತೆಗಳು ಹೆಚ್ಚಿವೆ. ಕೇಂದ್ರ ಸರ್ಕಾರದ ವಿತ್ತ ಕಾರ್ಯದರ್ಶಿ ಟಿ.ವಿ.ಸೋಮನಾಥ್‌ ನೇತೃತ್ವದ ಸಮಿತಿ ಮಾಸಾಂತ್ಯಕ್ಕೆ ಅದಕ್ಕೆ ಸಂಬಂಧಪಟ್ಟ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದೆ. ಹಳೆಯ ಪಿಂಚಣಿ ವ್ಯವಸ್ಥೆ ಜಾರಿ ಮಾಡಿ, ಬೊಕ್ಕಸಕ್ಕೆ ವಿತ್ತೀಯ ಹೊರೆ ಹೆಚ್ಚಿಸುವ ಅಂಶವನ್ನು ಸಮಿತಿ ಹೊಂದಿಲ್ಲ ಎನ್ನಲಾಗಿದೆ.

Advertisement

ಕಾಂಗ್ರೆಸ್‌ ಮತ್ತು ಅದರ ಮಿತ್ರ ಪಕ್ಷಗಳು ಅಧಿಕಾರದಲ್ಲಿ ಇರುವ ರಾಜ್ಯಗಳಲ್ಲಿ ಹಳೆಯ ಪಿಂಚಣಿ ವ್ಯವಸ್ಥೆ ಜಾರಿ ಮಾಡುವ ಬಗ್ಗೆ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಮಹತ್ವ ಪಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next