ಮಂಗಳೂರು : ನಿನ್ನೆ ಜನರಿಂದ ತುಂಬಿ ತುಳುಕುತ್ತಿದ್ದ ನಗರದ ಸೆಂಟ್ರಲ್ ಮಾರ್ಕೆಟ್ ಶುಕ್ರವಾರ ಸಂಪೂರ್ಣ ಬಂದ್ ಅಗಿದೆ. ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಆದೇಶ ನೀಡಿದ್ದು. ಈ ಹಿನ್ನೆಲೆಯಲ್ಲಿ ಮಾರ್ಕೆಟ್ ಅನ್ನು ಸಂಪೂರ್ಣ ಬಂದ್ ಮಾಡಲಾಗಿದೆ.
ನಿನ್ನೆ ಬೆಳಗ್ಗೆ 10 ಗಂಟೆಯವರೆಗೂ ಮಾರ್ಕೆಟ್ ನಲ್ಲಿ ಸಾಕಷ್ಟು ಜನರು ಇದ್ದರು. ಮಾಸ್ಕ್ ಇಲ್ಲದೆ, ಸಾಮಾಜಿಕ ಅಂತರ ಇಲ್ಲದೆ ವ್ಯಾಪಾರ ನಡೆಸುತ್ತಿದ್ದರು. ಇದೇ ಹಿನ್ನೆಲೆಯಲ್ಲಿ ಮಾರ್ಕೆಟ್ ಸುತ್ತ ಪೊಲೀಸರ ಗೇಟ್ ಹಾಕಿ ಬಂದ್ ಮಾಡಿದ್ದಾರೆ. ಅಲ್ಲದೆ ಬೈಕಂಪಾಡಿ ಎಪಿಎಂಸಿಯಲ್ಲೇ ವ್ಯಾಪಾರ ಮಾಡುವಂತೆ ಆದೇಶ ನೀಡಿದ್ದಾರೆ.