Advertisement

Hubballi: ಹೆಸರು ಬೆಳೆಗಾರರ ಸಮಸ್ಯೆ ನಿವಾರಣೆಗೆ ಕೇಂದ್ರದಿಂದ ಸ್ಪಂದನೆ: ಪ್ರಹ್ಲಾದ ಜೋಶಿ‌

05:01 PM Nov 06, 2024 | Team Udayavani |

ಹುಬ್ಬಳ್ಳಿ: ರಾಜ್ಯದಲ್ಲಿ ಬೆಂಬಲ‌ ಬೆಲೆಯಲ್ಲಿ‌ ಹೆಸರು ಕಾಳು ಖರೀದಿ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಆದೇಶಿಸಿದೆ.ಖಾರೀಫ್ ಹಂಗಾಮಿನಲ್ಲಿ ಒಟ್ಟು 38,320 ಮೆಟ್ರಿಕ್ ಟನ್ ಹೆಸರು ಕಾಳು ಖರೀದಿಗೆ ಅವಕಾಶ ಕಲ್ಪಿಸಲಾಗಿದೆ‌ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ‌ ತಿಳಿಸಿದ್ದಾರೆ.

Advertisement

ಹೆಸರು ಬೆಳೆಗಾರರ ಸಮಸ್ಯೆ ನಿವಾರಣೆಗೆ ಸ್ಪಂದಿಸುವಂತೆ ತಮ್ಮ ಮನವಿಗೆ ಪ್ರಧಾನಿ‌ ನರೇಂದ್ರ ಮೋದಿ, ಕೇಂದ್ರ‌ ಕೃಷಿ ಸಚಿವ ಶಿವರಾಜ ಸಿಂಗ್ ಚವ್ಹಾಣ ಅವರು ಸ್ಪಂದಿಸಿದ್ದಾರೆ.

ಈ‌ ಮೊದಲು 22,215 ಮೆಟ್ರಿಕ್ ಟನ್ ಹೆಸರು ಕಾಳು ಬೆಂಬಲ‌ ಬೆಲೆಯಲ್ಲಿ ಖರೀದಿಗೆ ಒಪ್ಪಿಗೆ ಸೂಚಿಸಲಾಗಿತ್ತು. ಇದೀಗ ಅದನ್ನು 38,320 ಮೆಟ್ರಿಕ್ ಟನ್ ಖರೀದಿಗೆ ಒಪ್ಪಿಗೆ ಸೂಚಿಸಲಾಗಿದ್ದು, ಸುಮಾರು 16,105 ಮೆ.ಟನ್ ಹೆಚ್ಚುವರಿ ಖರೀದಿಗೆ ಒಪ್ಪಿಗೆ ನೀಡಲಾಗಿದೆ ಎಂದು ಜೋಶಿಯವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: R Ashok ಮ್ಯಾಚ್ ಫಿಕ್ಸಿಂಗ್ ಎಂದು ಹೇಳಿರುವುದು ಸಂವಿಧಾನಾತ್ಮಕ ಹುದ್ದೆಗೆ ಮಾಡಿದ ಅವಮಾನ

Advertisement

Udayavani is now on Telegram. Click here to join our channel and stay updated with the latest news.

Next