Advertisement

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

12:46 PM Apr 17, 2024 | Team Udayavani |

ಉಡುಪಿ: ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ ಅವರು ಉಡುಪಿಗೆ ಆಗಮಿಸುತ್ತಿದ್ದಾರೆ. 19 ಏಪ್ರಿಲ್ 2024 ಶುಕ್ರವಾರ ಸಂಜೆ 3:30ಕ್ಕೆ ಸರಿಯಾಗಿ  ಉಡುಪಿ ನಗರದ ಹೋಟೆಲ್ ಕಿದಿಯೂರ್ ಮಾಧವ ಕೃಷ್ಣ ಸಭಾಂಗಣದಲ್ಲಿ  ಕೂರ್ಮ ಫೌಂಡೇಶನ್ ವತಿಯಿಂದ  ಸಂವಾದ ಕಾರ್ಯಕ್ರಮ ನಡೆಯಲಿದೆ.

Advertisement

ಕಳೆದ ಹತ್ತು ವರ್ಷಗಳ ನರೇಂದ್ರ ಮೋದಿ ಅವರ ಆಡಳಿತದಲ್ಲಿ ನಡೆದಿರುವ ವಿದೇಶಾಂಗ ನೀತಿಗಳ ಮತ್ತು ರಾಜ ತಾಂತ್ರಿಕ ಸುಧಾರಣೆಗಳ ಬಗ್ಗೆ  ಈ ಸಂವಾದ ನಡೆಯಲಿದ್ದು ಸಾರ್ವಜನಿಕರಿಗೆ ಮುಕ್ತ ಪ್ರವೇಶವಿದೆ.

ಉಡುಪಿಯ  ಅಧ್ಯಯನಶೀಲ ವಿದ್ಯಾರ್ಥಿಗಳು , ಸಂಪನ್ಮೂಲ ವ್ಯಕ್ತಿಗಳು, ಪ್ರಮುಖ ಉದ್ಯಮಿಗಳು ಚಿಂತಕರು  ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸಂವಾದದ ಕೊನೆಯಲ್ಲಿ ಸಾರ್ವಜನಿಕರಿಗೆ  ಮಾನ್ಯ ಮಂತ್ರಿಗಳ ಜೊತೆ ಪ್ರಶ್ನೋತ್ತರಕ್ಕೆ ಅವಕಾಶವಿದೆ.

Advertisement

Udayavani is now on Telegram. Click here to join our channel and stay updated with the latest news.

Next