Advertisement

ಡಿಕೆಶಿಗೆ ಭ್ರಷ್ಟಾಚಾರದ ಪ್ರಕರಣಗಳು ಹೊಸದೇನಲ್ಲ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

06:19 PM Oct 13, 2021 | Team Udayavani |

ಮೈಸೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಅವರ ಕುರಿತು ಸ್ವಪಕ್ಷದವರೇಯಾದ ಉಗ್ರಪ್ಪ ಹಾಗೂ ಸಲೀಂ ಮಾತನಾಡಿರುವುದು ಇದೀಗ ಬಿಜೆಪಿ ಪಕ್ಷಕ್ಕೆ ರಾಜಕೀಯ ಅಸ್ತ್ರವಾಗಿ ಬಳಕೆಯಾಗುತ್ತಿದೆ. ಉಗ್ರಪ್ಪ-ಸಲೀಂ ಅವರ ಸಂಭಾಷಣೆಯ ವಿಡಿಯೋ ಇಟ್ಟುಕೊಂಡು ಬಿಜೆಪಿ ನಾಯಕರು ಕಾಂಗ್ರೆಸ್ ಮೇಲೆ ಮುಗಿಬಿದ್ದಿದ್ದಾರೆ.

Advertisement

ಇಂದು ಮೈಸೂರಿನಲ್ಲಿ ಈ ಬಗ್ಗೆ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಇಂತಹ ಹೊಲಸು ರಾಜಕೀಯದ ಬಗ್ಗೆ ಮಾತನಾಡುವ ಆಸಕ್ತಿ ಇಲ್ಲ. ಡಿಕೆಶಿಗೆ ಭ್ರಷ್ಟಾಚಾರದ ಪ್ರಕರಣಗಳು ಹೊಸದೇನಲ್ಲ. ಕಾಂಗ್ರೆಸ್‌ ಅಂದ್ರೆ ಅದು ಹಗರಣಗಳ ಸರ್ಕಾರ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಸಾಕಷ್ಟು ಹಗರಣಗಳು ನಡೆದಿವೆ. ಅವರದು ಹಗರಣಗಳ ಸರ್ಕಾರವಾಗಿತ್ತು. ಡಿಕೆಶಿ ನಡೆಸಿದ ಹಗರಣವನ್ನ ಅವರ ಪಕ್ಷದ ಮುಖಂಡರೇ ಇದೀಗ ಬಯಲು ಮಾಡಿದ್ದಾರೆ ಎಂದರು.

ಉತ್ತರ ಪ್ರದೇಶದಲ್ಲಿ ದೊಡ್ಡ ಯುದ್ದವೇ ನಡೆಯುತ್ತಿದೆ. ಉತ್ತರ ಪ್ರದೇಶದಲ್ಲಿ ದೇಶದ ರಾಜಕೀಯ ನಿರ್ಣಯ ಮಾಡುವ ಚುನಾವಣೆ ಇದೆ. ಅಯೋಧ್ಯೆಯಲ್ಲಿ ಶತಮಾನಗಳ ನಮ್ಮ ಶ್ರೀರಾಮನ ಕನಸು ಈಡೇರಲಿದೆ. ಅದಕ್ಕಾಗಿ ಯೋಗೀಜಿಯ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಬೇಕು. ಈ ದೇಶ ನೆಮ್ಮದಿಯಿಂದ ಇರಬೇಕು. ಗಡಿಗಳ ರಕ್ಷಣೆ ಆಗಬೇಕು, ಕೃಷಿಕ ನೆಮ್ಮದಿಯಾಗಿರಬೇಕು ಎಂದು ಚಾಮುಂಡೇಶ್ವರಿಯಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದರು.

ಇನ್ನು ದೇಶದಲ್ಲಿ ರಸಗೊಬ್ಬರದ ಕೊರತೆ ಇಲ್ಲ ಎಂದು ತಿಳಿಸಿದ ಕರಂದ್ಲಾಜೆ, ಈ ವರ್ಷ ದೇಶದಲ್ಲಿ ಉತ್ತಮ ಮಳೆ ಆಗಿ ಕೃಷಿ ಆದಾಯ ಹೆಚ್ಚಾಗಿದೆ. ನಮಗೆ ಪೊಟಾಷ್ ಹೊರ ದೇಶದಿಂದ ಬರುತ್ತೆ. ಕೋವಿಡ್ ಕಾರಣಕ್ಕೆ ವಿದೇಶದಿಂದ ಬರುವ ರಸಗೊಬ್ಬರದಲ್ಲಿ ಕೊಂಚ ಕೊರತೆ ಇದೆ. ಮೋದಿ ಸರ್ಕಾರ ಇನ್ನೆರಡು ವರ್ಷದಲ್ಲಿ ರಸಗೊಬ್ಬರದಲ್ಲೂ ಸ್ವಾವಲಂಬಿ ಆಗುವತ್ತ ಕಾರ್ಯಕ್ರಮ ರೂಪಿಸಿದೆ. ಅದರಲ್ಲೂ ಆತ್ಮನಿರ್ಭರ ಸಾಧಿಸಲು ಹೆಚ್ಚು ಕಾರ್ಖಾನೆಗಳ ಸ್ಥಾಪನೆ ಆಗಯತ್ತಿದೆ. ಈಗ ಎಣ್ಣೆ ತೈಲ ಹೊರತುಪಡಿಸಿ ದೇಶ ಉಳಿದ ವಿಚಾರದಲ್ಲಿ ಆತ್ಮನಿರ್ಭರ ಸಾಧಿಸಿದೆ. ಖಾದ್ಯ ತೈಲದ ವಿಚಾರದಲ್ಲೂ ನಾವು ಸ್ವಾವಲಂಬನೆ ಸಾಧಿಸಲಿದ್ದೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next