Advertisement
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ರವಿವಾರ ನಗರ ಓಷಿಯನ್ ಪರ್ಲ್ ಹೊಟೇಲ್‌ನಲ್ಲಿ ಹಮ್ಮಿಕೊಳ್ಳಲಾದ ಪ್ರಣಾಳಿಕೆ ಸಲಹಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.ದಕ್ಷಿಣ ಭಾರತದಲ್ಲಿ ಬಿಜೆಪಿ ಹೆಚ್ಚು ಪಾಮುಖ್ಯ ನೀಡುವ ರಾಜ್ಯ ಕರ್ನಾಟಕ. ಬಿಜೆಪಿಯನ್ನು ಅಧಿಕಾರಕ್ಕೆ ತರಲು ಇಲ್ಲಿನ ಜನರು ಹಲವು ವರ್ಷಗಳ ಕಾಲ ಹೋರಾಟ ಮಾಡಿದ್ದಾರೆ.
Related Articles
ನಂತೂರು-ಕೆಪಿಟಿಯಲ್ಲಿ ಸುಗಮ ಸಂಚಾರಕ್ಕೆ ಫ್ಲೆಓವರ್, ಅಂಡರ್‌ಪಾಸ್ ನಿರ್ಮಾಣ, ಮಂಗಳೂರು -ಬೆಂಗಳೂರು ಮಾರ್ಗದಲ್ಲಿ ರೈಲುಗಳ ಸಂಖ್ಯೆ ಹೆಚ್ಚಿಸುವುದು, ಟೋಲ್‌ಗೇಟ್ ಕಡಿಮೆ ಮಾಡುವುದು, ಮಂಗಳೂರು-ಬೆಂಗಳೂರು ನಡುವೆ ಸಂಚಾರ ಯೋಗ್ಯ ರಸ್ತೆ, ಗೋವಾ ಮಾದರಿ ಬೀಚ್ ಪ್ರವಾಸೋದ್ಯಮ ಅಭಿವೃದ್ಧಿ, ಐಟಿ ಕ್ಷೇತ್ರದಲ್ಲಿ ಉದ್ಯೋಗಾವಕಾಶ ಸೃಷ್ಟಿ, ಮಂಗಳೂರಿಗೆ ಎನ್‌ಐಎ ಕಚೇರಿ, ದೇವಸ್ಥಾನಗಳಲ್ಲಿ ಗೋಶಾಲೆ, ಹಿಂದೂ ಭವನಗಳ ನಿರ್ಮಾಣ ಇತ್ಯಾದಿ ಪ್ರಣಾಳಿಕೆಯಲ್ಲಿ ಸೇರಿಸುವಂತೆ ಸಾರ್ವಜನಿಕರು ಆಗ್ರಹಿಸಿದರು. ಉದ್ಯಮಿಗಳು, ಎನ್‌ಜಿಒ ಪ್ರಮುಖರು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು, ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿದ್ದರು.
Advertisement
ಶಾಸಕ ವೇದವ್ಯಾಸ ಕಾಮತ್, ರಾಜ್ಯ ಪ್ರಣಾಳಿಕೆ ಸಮಿತಿ ಸಹ ಸಂಚಾಲಕ ರವೀಂದ್ರ ಪೈ, ಕ್ರೆಡೈ ಮಂಗಳೂರು ಕಾರ್ಯದರ್ಶಿ ಪ್ರಶಾಂತ್ ಸನಿಲ್, ನವಮಂಗಳೂರು ಬಂದರು ಬಳಕೆದಾರರ ಸಂಘದ ಅಧ್ಯಕ್ಷ ಬಾಲಕೃಷ್ಣ ಕೊಟ್ಟಾರಿ ಉಪಸ್ಥಿತರಿದ್ದರು.
ಜಿಲ್ಲಾ ಪ್ರಣಾಳಿಕೆ ಸಮಿತಿ ಸಂಚಾಲಕ ಸಿಎ ಶಾಂತಾರಾಮ ಶೆಟ್ಟಿ ಸ್ವಾಗತಿಸಿದರು. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಪ್ರಣಾಳಿಕೆ ಸಮಿತಿ ಸಂಚಾಲಕ ಸಂಜಯ್ ಪ್ರಭು ವಂದಿಸಿದರು. ವಿನ್ಯಾಸ್ ಕಾರ್ಯಕ್ರಮ ನಿರೂಪಿಸಿದರು.