Advertisement

ಕಾಶ್ಮೀರಕ್ಕೆ ಸಚಿವರ ನಿಯೋಗ: ವಿಶೇಷ ಸ್ಥಾನಮಾನ ರದ್ದತಿ ಬಗ್ಗೆ ಸ್ಥಳೀಯರಿಗೆ ಮನವರಿಕೆ

09:53 AM Jan 17, 2020 | keerthan |

ಹೊಸದಿಲ್ಲಿ/ಶ್ರೀನಗರ: ಹೊಸದಿಲ್ಲಿಯಲ್ಲಿರುವ ವಿದೇಶ ರಾಷ್ಟ್ರಗಳ ರಾಯಭಾರಿಗಳನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ಕಳುಹಿಸಿದ ಬಳಿಕ ಕೇಂದ್ರ ಸರಕಾರವೇ ಹಿರಿಯ ಸಚಿವರ ನಿಯೋಗವನ್ನು ಅಲ್ಲಿಗೆ ಕಳುಹಿಸಲು ತೀರ್ಮಾನಿಸಿದೆ. ತಂಡದಲ್ಲಿ ಮೂವತ್ತಾರು ಮಂದಿ ಇರಲಿದ್ದಾರೆ. ಅದಕ್ಕೆ ಗೃಹ ಸಚಿವ ಅಮಿತ್‌ ಶಾ ಅವರೇ ನೇತೃತ್ವ ವಹಿಸಲಿದ್ದಾರೆ.

Advertisement

ಜ. 18 - 24ರ ವರೆಗೆ ಈ ಭೇಟಿ ನಡೆಯಲಿದೆ. ಸೂಕ್ಷ್ಮ ಪ್ರದೇಶ ಸಹಿತ ಹಲವಾರು ಸ್ಥಳಗಳಿಗೆ ಭೇಟಿ ನೀಡಿ, ಯಾವ ಕಾರಣಕ್ಕಾಗಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಹಿಂಪಡೆದು ಕೊಳ್ಳಲಾಯಿತು. ಅನಂತರದ ದಿನಗಳಲ್ಲಿ ಕೇಂದ್ರ ಸರಕಾರದ ವತಿಯಿಂದ ಕೈಗೊಳ್ಳಲಾಗಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆಯೂ ಸ್ಥಳೀ ಯರಿಗೆ ಮನವರಿಕೆ ಮಾಡಿಕೊಡುವ ಪ್ರಯತ್ನವನ್ನು ಸಚಿವರ ನಿಯೋಗ ಮಾಡಲಿದೆ.

ಬೇರೆ ಬೇರೆ ಜಿಲ್ಲೆಗಳಿಗೆ ಸಚಿವರ ತಂಡ ಪ್ರವಾಸ ಮಾಡಲಿದೆ. ಪ್ರವಾಸದ ಬಗ್ಗೆ ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ಜಿ.ಕಿಶನ್‌ ರೆಡ್ಡಿ ಕೇಂದ್ರಾಡಳಿತ ಪ್ರದೇಶದ ಸರಕಾರಕ್ಕೆ ಪತ್ರ ಬರೆದಿದ್ದಾರೆ.

ಹಿಜ್ಬುಲ್‌ ಉಗ್ರ ಸಾವು: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಹಿಜ್ಬುಲ್‌ ಮುಜಾಹಿದೀನ್‌ ಉಗ್ರಗಾಮಿ ಸಂಘಟನೆಯ ಪ್ರಮುಖ ಭಯೋತ್ಪಾದಕನನ್ನು ಸಾಯಿಸಲಾಗಿದೆ. ಖಚಿತ ಸುಳಿವಿನ ಮೇರೆಗೆ ಈ ಕಾರ್ಯಾಚರಣೆ ನಡೆಸಲಾಗಿತ್ತು ಎಂದು ಸೇನೆ ಹೇಳಿದೆ. ಇದೇ ವೇಳೆ ಆವಂತಿಪುರದಲ್ಲಿ ಹಿಜ್ಬುಲ್‌ ಉಗ್ರಗಾಮಿಗಳಿಗೆ ನೆರವು ನೀಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೂಂದೆಡೆ ಡಿಎಸ್‌ಪಿ ದೇವಿಂದರ್‌ ಸಿಂಗ್‌ರನ್ನು ಸೇವೆಯಿಂದ ವಜಾ ಮಾಡಲು ಶಿಫಾರಸು ಮಾಡಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಡಿಜಿಪಿ ದಿಲಾಗ್‌ ಸಿಂಗ್‌ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next