ಬೆಳಗಾವಿ: ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿಯ ಪರಿಶೀಲನೆಗಾಗಿ ಮಂಗಳವಾರ ಜಿಲ್ಲೆಗೆ ಆಗಮಿಸಿದ ಕೇಂದ್ರ ಅಧ್ಯಯನ ತಂಡದ ಅಧಿಕಾರಿಗಳು ಗೋಕಾಕ, ಹುಕ್ಕೇರಿ ತಾಲೂಕುಗಳಲ್ಲಿ ಬೆಳೆ ಹಾನಿಯಾಗಿರುವದನ್ನು ಪರಿಶೀಲಿಸಿದರು.
ಮಳೆ ಹಾಗೂ ನದಿಗಳ ಪ್ರವಾಹದಿಂದ ಆಗಿರುವ ಹಾನಿಯ ಬಗ್ಗೆ ಅಧಿಕಾರಿಗಳಿಗೆ ವಿವರಿಸಿದ ರೈತರು ಆದಷ್ಟು ಬೇಗ ನ್ಯಾಯಯುತ ಪರಿಹಾರ ನೀಡುವಂತೆ ಮನವಿ ಮಾಡಿದರು.
ಇದಕ್ಕೂ ಮುನ್ನ ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಜಿಲ್ಲೆಯ ಸ್ಥಿತಿಗತಿ ಕುರಿತು ಕೇಂದ್ರ ಅಧ್ಯಯನ ತಂಡದ ಅಧಿಕಾರಿಗಳಿಗೆ ಮಾಹಿತಿ ನೀಡಿದರು.
ಇದನ್ನೂ ಓದಿ: ಸಚಿವ ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ, ದೆಹಲಿ ಭೇಟಿಯ ಬಗ್ಗೆ ತೀರ್ಮಾನಿಸಿಲ್ಲ: ಬಿಎಸ್ ವೈ
ಸಭೆಯಲ್ಲಿ ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್, ಅಪರ ಜಿಲ್ಲಾಧಿಕಾರಿ ಮೊದಲಾದವರು ಉಪಸ್ಥಿತರಿದ್ದರು.
ಇದನ್ನೂ ಓದಿ:ಯಾವುದೇ ಪ್ರದರ್ಶನಗಳಿಲ್ಲ, ಜನ ಸೇರುವಂತಿಲ್ಲ, ಅರಮನೆ ಆವರಣದಲ್ಲೇ ಜಂಬೂ ಸವಾರಿ: ಇದು ಸರಳ ದಸರಾ