ನವದೆಹಲಿ:ದೇಶದಲ್ಲಿನ ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಸೆಂಟ್ರಲ್ ವಿಸ್ತಾ ಬೃಹತ್ ಕಟ್ಟಡ ಕಾಮಗಾರಿಗೆ ತಡೆ ನೀಡಬೇಕೆಂಬ ಅರ್ಜಿಯನ್ನು ಸೋಮವಾರ (ಮೇ 31) ವಜಾಗೊಳಿಸಿರುವ ದೆಹಲಿ ಹೈಕೋರ್ಟ್, ಇದೊಂದು ಅಗತ್ಯವಾಗಿರುವ ರಾಷ್ಟ್ರೀಯ ಯೋಜನೆಯಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ. ಅಲ್ಲದೇ ಅರ್ಜಿದಾರರಿಗೆ ಒಂದು ಲಕ್ಷ ರೂಪಾಯಿ ದಂಡವನ್ನು ವಿಧಿಸಿದೆ.
ಇದನ್ನೂ ಓದಿ:ತಮಿಳು ನಟಿಯನ್ನು ವಿವಾಹವಾಗುವುದಾಗಿ ನಂಬಿಸಿ ಮೋಸ; ಮಾಜಿ ಸಚಿವನ ವಿರುದ್ಧ ರೇಪ್ ಕೇಸ್
ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ನಡೆಯುತ್ತಿರುವ ಸೆಂಟ್ರಲ್ ವಿಸ್ತಾ ಕಾಮಗಾರಿ ಯೋಜನೆ ಸ್ಥಗಿತಗೊಳಿಸಬೇಕು ಎಂದು ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಮುಖ್ಯನ್ಯಾಯಮೂರ್ತಿ ಡಿ.ಎನ್. ಪಟೇಲ್ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್ ನೇತೃತ್ವದ ಪೀಠ ಮೇ 31ರಂದು ತೀರ್ಪು ನೀಡುವುದಾಗಿ ತಿಳಿಸಿತ್ತು.
ಈಗಾಗಲೇ ಗುರುತಿಸಲಾಗಿರುವ ಪ್ರದೇಶದಲ್ಲಿ ಸೆಂಟ್ರಲ್ ವಿಸ್ತಾ ಕಟ್ಟಡ ಕಾಮಗಾರಿ ನಡಯುತ್ತಿದೆ. ಈ ಸಂದರ್ಭದಲ್ಲಿ ಯೋಜನೆಗೆ ತಡೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಹೈಕೋರ್ಟ್ ಪೀಠ ಸ್ಪಷ್ಟಪಡಿಸಿದ್ದು, ಇದೊಂದು ಪ್ರೇರೇಪಣೆಯ ಅರ್ಜಿ ಎಂದು ಹೇಳಿ ದೂರುದಾರರಿಗೆ ಒಂದು ಲಕ್ಷ ರೂಪಾಯಿ ದಂಡ ವಿಧಿಸಿರುವುದಾಗಿ ವರದಿ ಹೇಳಿದೆ.
“ಇದೊಂದು ರಾಷ್ಟ್ರೀಯ ಅತ್ಯಗತ್ಯದ ಯೋಜನೆ. ಇದು ಬಹಳ ಮುಖ್ಯವಾದ ಯೋಜನೆ ಎಂದು ಸೆಂಟ್ರಲ್ ವಿಸ್ತಾ ಯೋಜನೆಯ ಕಾನೂನು ಬದ್ಧತೆಯನ್ನು” ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ. ಈ ಸೆಂಟ್ರಲ್ ವಿಸ್ತಾ ಯೋಜನೆಯನ್ನು ಕೇಂದ್ರ ಸರ್ಕಾರ 2021ರೊಳಗೆ ಪೂರ್ಣಗೊಳಿಸಬೇಕಾಗಿದೆ.