Advertisement

ನಾಡದೋಣಿ ಮೀನುಗಾರರಿಗೆ ಕೇಂದ್ರದಿಂದ 25 ಲಕ್ಷ ಲೀಟರ್ ಹೆಚ್ಚುವರಿ ಸೀಮೆ ಎಣ್ಣೆ ಬಿಡುಗಡೆ

05:14 PM Jan 12, 2023 | Team Udayavani |

ಉಡುಪಿ : ಕರಾವಳಿ ಪ್ರದೇಶದ ಸಾಂಪ್ರದಾಯಿಕ ನಾಡದೋಣಿ ಮೀನುಗಾರರಿಗೆ ಕೇಂದ್ರದಿಂದ ಹೆಚ್ಚುವರಿ 2500ಕೆಎಲ್ (25 ಲಕ್ಷ ಲೀಟರ್) ಸೀಮೆ ಎಣ್ಣೆ ಬಿಡುಗಡೆ ಮತ್ತು 2022-23ನೇ ಸಾಲಿನ ಹಂಚಿಕೆಗಿಂತಲೂ ಹೆಚ್ಚುವರಿ ಸೌಲಭ್ಯ ಬಿಡುಗಡೆಗೊಳಿಸಿದೆ ಎಂದು ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

Advertisement

2022-23 ಸಾಲಿನಲ್ಲಿ ಕೇಂದ್ರ ಸರ್ಕಾರದ ಪೆಟ್ರೋಲಿಯಂ ಸಚಿವಾಲಯ ಕರ್ನಾಟಕ ರಾಜ್ಯದ ಕರಾವಳಿ ಪ್ರದೇಶದ ಸಾಂಪ್ರದಾಯಿಕ ನಾಡದೋಣಿ ಮಿನುಗಾರರಿಗೆ ಒಟ್ಟು 5472 ಕೆ.ಎಲ್. ಸೀಮೆ ಎಣ್ಣೆಯನ್ನು ಹಂಚಿಕೆ ಮಾಡಿತ್ತು. ಅದರಂತೆ ಹಂತಹಂತವಾಗಿ ರಾಜ್ಯದ ಮೀನುಗಾರರ ಸೌಲಭ್ಯಕ್ಕಾಗಿ 2472KL + 3000KL ಸೀಮೆ ಎಣ್ಣೆಯನ್ನು ಬಿಡುಗೊಡೆಗೊಳಿಸಿತ್ತು. ಜನವರಿ 12ರಂದು ಪೆಟ್ರೋಲಿಯಂ ಸಚಿವಾಲಯ ಹಂಚಿಕೆಗಿಂತಲೂ ಹೆಚ್ಚುವರಿಯಾಗಿ 2500 ಕೆಎಲ್ ಸೀಮೆ ಎಣ್ಣೆಯನ್ನು ಕರಾವಳಿ ಪ್ರದೇಶದ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಸೌಲಭ್ಯಕ್ಕಾಗಿ ಬಿಡುಗಡೆಗೊಳಿಸಿ ಆದೇಶ ಮಾಡಿದೆ ಎಂದು ಶೋಭಾ ಕರಂದ್ಲಾಜೆಯವರು ತಿಳಿಸಿದ್ದಾರೆ.

2022-23ರ ಸಾಲಿನ ಅವಧಿಯ ಹಂಚಿಕೆಗಿಂತಲೂ ಹೆಚ್ಚಿನ ಪ್ರಮಾಣದ ಸೀಮೆ ಎಣ್ಣೆಯನ್ನು ರಾಜ್ಯದ ಮೀನುಗಾರರಿಗೆ ಬಿಡುಗಡೆಗೊಳಿಸಿದೆ. ಒಟ್ಟಾರೆಯಾಗಿ 7972 ಕೆ.ಎಲ್. (5472 ಕೆ.ಎಲ್.+2500ಕೆ.ಎಲ್.) ಸೀಮೆ ಎಣ್ಣೆ ಹಂಚಿಕೆಯನ್ನು 2022-23ನೆ ಸಾಲಿನಲ್ಲಿ ರಾಜ್ಯದ ಕರಾವಳಿ ಮೀನುಗಾರರು ಕೇಂದ್ರದಿಂದ ಪಡೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಕರಾವಳಿ ಪ್ರದೇಶದ ಮೀನುಗಾರರ ಅಗತ್ಯಕ್ಕೆ ತಕ್ಕಂತೆ ಕೇಂದ್ರ ಸರ್ಕಾರ ಸ್ಪಂದನೆಯನ್ನು ನೀಡಿದೆ. ಈ ಬಗ್ಗೆ ಕೇಂದ್ರ ಸರ್ಕಾರದ ಪೆಟ್ರೋಲಿಯಂ ಸಚಿವರಲ್ಲಿ ಮನವಿಯಲ್ಲಿ ಮಾಡಲಾಗಿತ್ತು. ಕರಾವಳಿ ಪ್ರದೇಶದ ಜೀವನಾಧಾರ ಮೀನುಗಾರಿಕೆ. ಮೀನುಗಾರಿಕೆಯನ್ನೆ ಬಹುಪಾಲು ಜನರು ನಂಬಿಕೊಂಡು ಜೀವನ ಮಾಡುತ್ತಿದ್ದಾರೆ. ಆದ್ದರಿಂದ ಕರಾವಳಿ ಪ್ರದೇಶದ ಸಾಂಪ್ರದಾಯಿಕ ಮೀನುಗಾರರ ಮನವಿಯನ್ನು ಪರಿಗಣಿಸಬೇಕೆಂದು ಒತ್ತಾಯಪೂರ್ವಕವಾಗಿ ಮನವಿ ಮಾಡಿದ್ದು, ಅದರಂತೆ ಕೇಂದ್ರದ ಪೆಟ್ರೋಲಿಯಂ ಸಚಿವರಾದ ಹರದೀಪ ಸಿಂಗ್ ಪುರಿಯವರು ಸ್ಪಂದಿಸಿ, ಮೀನುಗಾರರ ಬೇಡಿಕೆಯನ್ನು ಈಡೇರಿಸಿದ್ದಾರೆ ಎಂದು ತಿಳಿಸಿದ್ದಾರೆ.

ಹರದೀಪ ಸಿಂಗ್ ಪುರಿಯವರಿಗೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಜ್ಯದ ಕರಾವಳಿ ಪ್ರದೇಶದ ಸಮಸ್ತ ಮೀನುಗಾರರ ಪರವಾಗಿ ಧನ್ಯವಾದಗಳನ್ನು ಸಲ್ಲಿಸುವುದಾಗಿ ಸಚಿವೆ ಶೋಭಾ ಕರಂದ್ಲಾಜೆಯವರು ತಿಳಿಸಿದ್ದಾರೆ.

Advertisement

ನಾಡಿನ ಸಮಸ್ತ ಮೀನುಗಾರರ ಪರ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸದಾ ತಮ್ಮೊಂದಿಗೆ ಇದೆ. ಕೇಂದ್ರ ಸರ್ಕಾರ ನೀಡಿದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಿರೆಂದುಶೋಭಾ ಕರಂದ್ಲಾಜೆಯವರು ಮೀನುಗಾರರಲ್ಲಿ ಮನವಿ ಮಾಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next