ನವದೆಹಲಿ/ಅಹಮದಾಬಾದ್: ಕೇಂದ್ರ ಗೃಹ ಸಚಿವಾಲಯ ಅನುಮೋದನೆ ನೀಡಿದ ಬಳಿಕವೇ ಬಿಲ್ಕಿಸ್ ಬಾನೋ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಗಳನ್ನು ಬಿಡುಗಡೆ ಮಾಡಲಾಯಿತು.
ಹೀಗೆಂದು ಗುಜರಾತ್ ಸರ್ಕಾರ ಸೋಮವಾರ ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಅರಿಕೆ ಮಾಡಿಕೊಳ್ಳಲಾಗಿದೆ.
ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ 11 ಮಂದಿ 14 ವರ್ಷದ ಜೈಲು ಶಿಕ್ಷೆ ಪೂರ್ತಿಗೊಳಿಸಿದ್ದಾರೆ. ಜತೆಗೆ ಅವರು ಉತ್ತಮ ನಡವಳಿಕೆ ತೋರಿಸಿದ್ದರಿಂದ ಅವರನ್ನು ಬಿಡುಗಡೆಗೊಳಿಸಲಾಯಿತು.
ಈ ಬಗ್ಗೆ ಜು.11ರಂದು ಕೇಂದ್ರ ಗೃಹ ಸಚಿವಾಲಯ ಅನುಮತಿ ನೀಡಿತ್ತು ಎಂದು ರಾಜ್ಯ ಸರ್ಕಾರ ಪ್ರತಿಪಾದಿಸಿದೆ. 2002 ಮಾ.3ರಂದು ನಡೆದಿದ್ದ ಘಟನೆಗೆ ಸಂಬಂಧಿಸಿದಂತೆ 11 ಮಂದಿಯನ್ನು ಬಂಧಿಸಲಾಗಿತ್ತು.
ಇತ್ತೀಚೆಗೆ ಅವರನ್ನು ಸನ್ನಡತೆಯ ಆಧಾರದಲ್ಲಿ ಬಿಡುಗಡೆ ಮಾಡಿದ್ದು ಕೋಲಾಹಲಕ್ಕೆ ಕಾರಣವಾಗಿತ್ತು.