Advertisement

ಎಚ್ಚರ…ಹೊಸ ವರ್ಷಾಚರಣೆಗೆ ಕಟ್ಟುನಿಟ್ಟಿನ ನಿರ್ಬಂಧ ವಿಧಿಸಿ: ರಾಜ್ಯ ಸರ್ಕಾರಗಳಿಗೆ ಕೇಂದ್ರ

03:25 PM Dec 30, 2020 | Team Udayavani |

ನವದೆಹಲಿ:ಬ್ರಿಟನ್ ನಿಂದ ಭಾರತಕ್ಕೆ ವಾಪಸ್ ಆದವರಿಂದ ನೂತನ ರೂಪಾಂತರಿತ ಕೋವಿಡ್ ಸೋಂಕು ಹಾಗೂ ಕೋವಿಡ್ 19 ಸೋಂಕು ಹರಡದಿರುವ ಕುರಿತು ಮುಂಜಾಗ್ರತಾ ಕ್ರಮವಾಗಿ ಹೊಸ ಸಂಭ್ರಮಾಚರಣೆ ಸಂದರ್ಭದಲ್ಲಿ ರಾಜ್ಯ ಸರ್ಕಾರಗಳು ಕಟ್ಟುನಿಟ್ಟಿನ ನಿರ್ಬಂಧ ವಿಧಿಸಬೇಕು ಎಂದು ಕೇಂದ್ರ ಸರ್ಕಾರ ಬುಧವಾರ(ಡಿಸೆಂಬರ್ 30, 2020) ಸಲಹೆ ನೀಡಿದೆ.

Advertisement

ಜನಸಂದಣಿಯನ್ನು ತಡೆಯುವ ನಿಟ್ಟಿನಲ್ಲಿ ಡಿಸೆಂಬರ್ 30, 31 ಹಾಗೂ ಜನವರಿ 1ರಂದು ನಿರ್ಬಂಧ ವಿಧಿಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಲಾಗಿತ್ತು. ಅದರಂತೆ ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ದೇಶಾದ್ಯಂತ ವಿವಿಧ ರಾಜ್ಯಗಳಲ್ಲಿ ಹೊಸ ವರ್ಷಾಚರಣೆಗೆ ಕಠಿಣ ನಿರ್ಬಂಧ ವಿಧಿಸಲಾಗಿದೆ.

ಕಳೆದ ಮೂರು ತಿಂಗಳಿನಿಂದ ದೇಶದಲ್ಲಿ ಕೋವಿಡ್ 19 ಸೋಂಕಿನ ಸಕ್ರಿಯ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದೆ. ಏತನ್ಮಧ್ಯೆ ಬ್ರಿಟನ್ ಮತ್ತು ಅಮೆರಿಕದಲ್ಲಿ ನೂತನ ರೂಪಾಂತರಿತ ಕೋವಿಡ್ ಸೋಂಕು ಕಾಣಿಸಿಕೊಂಡಿರುವ ನಿಟ್ಟಿನಲ್ಲಿ ಇನ್ನೂ ಕೂಡಾ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕಾದ ಅಗತ್ಯವಿದೆ ಎಂದು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಬರೆದಿರುವ ಪತ್ರದಲ್ಲಿ ತಿಳಿಸಿರುವುದಾಗಿ ವರದಿ ವಿವರಿಸಿದೆ.

ಚಳಿಗಾಲದಲ್ಲಿನ ಹೊಸ ವರ್ಷ ಸಂಭ್ರಮಾಚರಣೆಯನ್ನು ಕಟ್ಟು ನಿಟ್ಟಿನ ನಿರ್ಬಂಧದ ಮೂಲಕ ಆಚರಿಸುವ ಮೂಲಕ ಕ್ಷಿಪ್ರವಾಗಿ ಹರಡಬಲ್ಲ ನೂತನ ರೂಪಾಂತರಿತ ಕೋವಿಡ್ ಸೋಂಕನ್ನು ತಡೆಯಬೇಕಾಗಿದೆ. ಅಲ್ಲದೇ ಹೆಚ್ಚು ಜನರು ಗುಂಪುಗೂಡಲು ಅವಕಾಶ ನೀಡಬಾರದು ಎಂದು ಕೇಂದ್ರ ಎಚ್ಚರಿಸಿದೆ.

ಏತನ್ಮಧ್ಯೆ ಅಂತರ್ ಜಿಲ್ಲೆ ಮತ್ತು ಅಂತರಾಜ್ಯ ನಡುವೆ ಜನರ ಓಡಾಟ ಹಾಗೂ ಸರಕು ಸಾಗಾಟಕ್ಕೆ ಯಾವುದೇ ನಿರ್ಬಂಧ ವಿಧಿಸಿಲ್ಲ. ಹಬ್ಬದ ಸಂದರ್ಭದಲ್ಲಿ ಕೋವಿಡ್ ಸೋಂಕು ಪ್ರಕರಣ ಹೆಚ್ಚಳವಾಗಿರುವ ನಿಟ್ಟಿನಲ್ಲಿ ಇನ್ನೂ ಹೆಚ್ಚಿನ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕಾಗಿರುವುದು ಅಗತ್ಯವಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next