Advertisement

ಸೆಲ್ಫಿ ಅಪಾಯ ವಲಯ ಗುರುತಿಸಲು ಸೂಚನೆ

10:10 AM Apr 04, 2018 | Team Udayavani |

ಹೊಸದಿಲ್ಲಿ: ಪ್ರವಾಸಿ ತಾಣಗಳಲ್ಲಿ ಸೆಲ್ಫಿ ತೆಗೆಯಲು ಹೋಗಿ ಸಾವು ಸಂಭವಿಸುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಅಂಥ ಪ್ರವಾಸಿ ತಾಣಗಳನ್ನು ಗುರುತಿಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಲಾಗಿದೆ ಎಂದು ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ಹಂಸರಾಜ್‌ ಅಹಿರ್‌ ಲೋಕಸಭೆಗೆ ನೀಡಿದ ಲಿಖೀತ ಉತ್ತರದಲ್ಲಿ ತಿಳಿಸಿದ್ದಾರೆ. ಪ್ರವಾಸಿ ಸ್ಥಳಗಳಿಗೆ ತೆರಳುವವರಿಗೆ ಸೆಲ್ಫಿ ತೆಗೆಯುವಾಗ ಕೈಗೊಳ್ಳಬೇಕಾದ ಮುಂಜಾಗರೂಕತೆ, ದುರಂತ ಉಂಟಾದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಸೂಚಿಸಲಾಗಿದೆ. ಕೆಲವೆಡೆ ‘ಸೆಲ್ಫಿ ನಿಷೇಧ ವಲಯ’ ಎಂಬ ಫ‌ಲಕಗಳನ್ನು ಹಾಕುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ ಅಹಿರ್‌. ಈ ಬಗ್ಗೆ ಪ್ರವಾಸೋದ್ಯಮ ಸಚಿವಾಲಯ ರಾಜ್ಯಗಳಿಗೆ ಸೂಚನೆ ಕಳುಹಿಸಿದೆ ಎಂದು ಹೇಳಿದ್ದಾರೆ  ಕೆಲವೊಂದು ಸ್ಥಳಗಳಲ್ಲಿ ಸೆಲ್ಫಿ ತೆಗೆಯಬಾರದು ಎಂದು ಘೋಷಿಸುವಂತೆಯೂ ಸೂಚಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next