Advertisement

ಕೇಜ್ರಿವಾಲ್‌ ಭೇಟಿಗೆ ಸಿಗದ ಅನುಮತಿ

06:00 AM Jun 17, 2018 | Team Udayavani |

ನವದೆಹಲಿ: ದೆಹಲಿ ಲೆಫ್ಟಿನೆಂಟ್‌ ಗವರ್ನರ್‌ ಅನಿಲ್‌ ಬೈಜಲ್‌ ನಿವಾಸದಲ್ಲಿ 6 ನೇ ದಿನ ಪೂರೈಸಿರುವ ಸಿಎಂ ಅರವಿಂದ ಕೇಜ್ರಿವಾಲ್‌ಗೆ ಕರ್ನಾಟಕದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ಕೇರಳ ಸಿಎಂ ಪಿಣರಾಯಿ ವಿಜಯನ್‌ ಬೆಂಬಲ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಕೇಜ್ರಿವಾಲ್‌ರನ್ನು ಭೇಟಿ ಮಾಡಿ ಮಾತುಕತೆ ನಡೆಸಬೇಕೆಂದು ಇದ್ದರೂ ಅವರಿಗೆ ಲೆಫ್ಟಿನೆಂಟ್‌ ಗವರ್ನರ್‌ ಅನಿಲ್‌ ಬೈಜಲ್‌ ಅನುಮತಿ ನೀಡಿಲ್ಲ. ಅದಕ್ಕೆ ಪ್ರತಿಕ್ರಿಯೆ ನೀಡಿದ ಕೇಜ್ರಿವಾಲ್‌ ಪಿಎಂಓ ಸೂಚನೆ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬಂದಿರಬಹುದು ಎಂದು ವ್ಯಂಗ್ಯವಾಡಿದ್ದಾರೆ.

Advertisement

ಇದೇ ವೇಳೆ ಸಂದರ್ಶನವೊಂದರಲ್ಲಿ ಮಾತನಾಡಿ ಕೇಜ್ರಿವಾಲ್‌ ಈ ಹಿಂದೆ ಸಿಎಂ ಆಗಿದ್ದ ಶೀಲಾ ದೀಕ್ಷಿತ್‌ಗೆ ಇದ್ದಷ್ಟು ಅಧಿಕಾರವೂ ನನಗಿಲ್ಲ ಎಂದಿದ್ದಾರೆ. ದೆಹಲಿ ಸರ್ಕಾರದ ಎಲ್ಲ ಅಧಿಕಾರಗಳನ್ನೂ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕಿತ್ತುಕೊಂಡಿದೆ ಎಂದು ಟೀಕಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next