Advertisement

ರೊಹಿಂಗ್ಯಾಗಳ ದತ್ತಾಂಶ ಸಂಗ್ರಹಿಸಿ: ರಾಜನಾಥ್‌ ಸೂಚನೆ

08:05 AM Sep 28, 2018 | Karthik A |

ಕೊಚ್ಚಿ: ಭಾರತದಲ್ಲಿರುವ ರೊಹಿಂಗ್ಯಾಗಳೆಲ್ಲರೂ ‘ಅಕ್ರಮ ವಲಸಿಗರು’ ಎಂದು ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಗುರುವಾರ ಹೇಳಿದ್ದಾರೆ. ಅಲ್ಲದೆ, ರೊಹಿಂಗ್ಯಾಗಳ ಚಲನವಲನಗಳ ಮೇಲೆ ನಿಗಾ ಇಟ್ಟು, ಅವರ ವೈಯಕ್ತಿಕ ಮಾಹಿತಿ ಸಂಗ್ರಹಿಸಿ ನೀಡುವಂತೆ ರಾಜ್ಯ ಸರಕಾರಗಳಿಗೆ ಸೂಚಿಸಿದ್ದಾರೆ. ಅಲ್ಲದೆ, ಅವರನ್ನು ಮ್ಯಾನ್ಮಾರ್‌ಗೆ ಗಡಿಪಾರು ಮಾಡಲಾಗುವುದು ಎಂದೂ ಹೇಳಿದ್ದಾರೆ. ಕೊಚ್ಚಿಯಲ್ಲಿ ಈ ಬಗ್ಗೆ ತಿಳಿಸಿದ ಸಚಿವ ರಾಜನಾಥ್‌, ಕೇರಳ ಸೇರಿದಂತೆ ಎಲ್ಲಾ ರಾಜ್ಯಗಳಿಗೂ ರೊಹಿಂಗ್ಯಾಗಳು ಅಕ್ರಮವಾಗಿ ನೆಲೆಸಿರುವ ಬಗ್ಗೆ ದತ್ತಾಂಶಗಳನ್ನು ಸಂಗ್ರಹಿಸಲು ಹೇಳಲಾಗಿದೆ. ಅವರು ದೇಶದ ನಾನಾ ಭಾಗಗಳಿಗೆ ವಲಸೆ ಹೋಗುತ್ತಿರುವ ಬಗ್ಗೆಯೂ ಮಾಹಿತಿ ಇದೆ. ಅಲ್ಲದೆ, ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಚಾರಗಳನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳದಂತೆ ಎಲ್ಲಾ ಪಕ್ಷಗಳಿಗೂ ಮನವಿ ಮಾಡುತ್ತೇನೆ ಎಂದಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next