ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯ ಸಭೆಗೆ ಗೈರು ಹಾಜರಾಗಲು ಕಾರಣ ಏನು ಎಂಬ ಬಗ್ಗೆ ವಿವರಣೆ ನೀಡುವಂತೆ ಕೇಂದ್ರ ಸರ್ಕಾರ ಮಂಗಳವಾರ(ಜೂನ್ 01) ಪಶ್ಚಿಮಬಂಗಾಳ ಮಾಜಿ ಮುಖ್ಯ ಕಾರ್ಯದರ್ಶಿ ಅಲಪನ್ ಬಂಡೋಪಾಧ್ಯಾಯಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ಇದನ್ನೂ ಓದಿ:ಕೇದಾರ ಘಾಟ್ ನದಿ ತೀರದಲ್ಲಿ ಕೋವಿಡ್ ಸಂತ್ರಸ್ತರ ಶವ ತಿನ್ನುತ್ತಿರುವ ನಾಯಿಗಳು; ವಿಡಿಯೋ ವೈರಲ್
ಪಶ್ಚಿಮಬಂಗಾಳ ಮಾಜಿ ಮುಖ್ಯಕಾರ್ಯದರ್ಶಿ ಅಲಪನ್ ಬಂಡೋಪಾಧ್ಯಾಯ ಅವರಿಗೆ ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿ 3 ದಿನಗಳೊಳಗೆ ಲಿಖಿತ ಉತ್ತರ ನೀಡುವಂತೆ ಶೋಕಾಸ್ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಎಎನ್ ಐ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.
ಶುಕ್ರವಾರ ಮಮತಾ ಬ್ಯಾನರ್ಜಿ ಮತ್ತು ಬಂಡೋಪಾಧ್ಯಾಯ ಬಂಗಾಳಕ್ಕೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ಯಸ್ ಚಂಡಮಾರುತದಿಂದ ಸಂಭವಿಸಿದ ಹಾನಿ ಕುರಿತ ವರದಿಯನ್ನು ನೀಡಿದ್ದರು. ನಂತರ ನಡೆದ ಪುನರ್ ಪರಿಶೀಲನಾ ಸಭೆಗೆ ಇಬ್ಬರು ಗೈರು ಹಾಜರಾಗಿದ್ದರು. ಈ ಘಟನೆ ನಂತರ ಬಂಗಾಳದ ಮುಖ್ಯ ಕಾರ್ಯದರ್ಶಿಯನ್ನು ವಾಪಸ್ ಕರೆಯಿಸಿಕೊಳ್ಳುವುದಾಗಿ ತಿಳಿಸಿ, ಸಿಬ್ಬಂದಿ ಮತ್ತು ತರಬೇತಿ ಇಲಾಖೆಗೆ ಮೇ 31ಎಂದು ವರದಿ ಮಾಡಿಕೊಳ್ಳಬೇಕು ಎಂದು ಬಂಡೋಪಾಧ್ಯಾಯ ಅವರಿಗೆ ಕೇಂದ್ರ ಸರ್ಕಾರ ಸೂಚಿಸಿತ್ತು.
ದಿಢೀರ್ ಬೆಳವಣಿಗೆಯಲ್ಲಿ ಪಶ್ಚಿಮಬಂಗಾಳದ ಮುಖ್ಯಕಾರ್ಯದರ್ಶಿ ಅಲಪನ್ ಬಂಡೋಪಾಧ್ಯಾಯ ಅವರು ತಮ್ಮ ಹುದ್ದೆಯಿಂದ ನಿವೃತ್ತರಾಗಿದ್ದು, ಈ ಸಂದರ್ಭದಲ್ಲಿಯೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮುಖ್ಯಸಲಹೆಗಾರರಾಗಿ ಸೋಮವಾರ (ಮೇ 31) ನೇಮಕಗೊಂಡಿದ್ದರು.