ಈಗಾಗಲೇ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಮಂಗಳವಾರ ಇದಕ್ಕೆ ಸಂಬಂಧಿಸಿದ ಮಾರ್ಗ ಸೂಚಿಯನ್ನು ಬಿಡುಗಡೆ ಮಾಡಿದೆ.
Advertisement
ತರಗತಿಗಳಲ್ಲಿ ವಿದ್ಯಾರ್ಥಿಗಳು ಕನಿಷ್ಠ 6 ಅಡಿ ಶಾರೀರಿಕ ಅಂತರ ಕಾಪಾಡಿಕೊಳ್ಳಬೇಕು. ಅದೇ ರೀತಿ, ಸಿಬ್ಬಂದಿ ಕೊಠಡಿ, ಕಚೇರಿಗಳು, ಗ್ರಂಥಾಲಯ, ಕೆಫೆಟೇರಿಯಾಗಳಲ್ಲೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಮುಖ್ಯ. ಶಾಲೆಗಳಲ್ಲಿ ಅಸೆಂಬ್ಲಿ, ಕ್ರೀಡೆ ಮತ್ತಿತರ ಕಾರ್ಯಕ್ರಮ ನಡೆಸುವಂತಿಲ್ಲ.
ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಡೆಸುವ ಭೂವಿಜ್ಞಾನಿ ಹುದ್ದೆಯ ಪರೀಕ್ಷಾ ಕೇಂದ್ರಗಳನ್ನು ಬದಲು ಮಾಡಿಕೊಳ್ಳುವ ಆಯ್ಕೆಯನ್ನು ಅಭ್ಯರ್ಥಿಗಳಿಗೆ ನೀಡಲಾಗಿದೆ. ಸೆ.8 ರಿಂದ 13ರ ವರೆಗೆ ಅಭ್ಯರ್ಥಿಗಳಿಗೆ ಈ ಅವಕಾಶ ಲಭ್ಯವಿರಲಿದೆ. upsconline.nic.inಗೆ ಲಾಗ್ ಇನ್ ಆಗುವ ಮೂಲಕ ಅಭ್ಯರ್ಥಿಗಳು ತಮ್ಮ ಇಚ್ಛೆಯ ಪರೀಕ್ಷಾ ಕೇಂದ್ರಗಳನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶವಿದೆ ಎಂದು ಯುಪಿಎಸ್‌ಸಿ ಮಂಗಳವಾರ ತಿಳಿಸಿದೆ.