ನವದೆಹಲಿ: ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆ ಆಡಳಿತಾರೂಢ ಬಿಜೆಪಿ ಮತ್ತು ವಿಪಕ್ಷಗಳ ನಡುವೆ ವಾಕ್ಸಮರಕ್ಕೆ ವೇದಿಕೆಯಾಗಿರುವ ನಡುವೆಯೇ ಮುಖ್ಯ ಚುನಾವಣಾ ಆಯುಕ್ತ ಹಾಗೂ ಚುನಾವಣಾ ಕಮಿಷನರ್ ಗಳನ್ನು ನೇಮಕ ಮಾಡುವ ಸಮಿತಿಯ ಸದಸ್ಯತ್ವದಿಂದ ಸಿಜೆಐ(ಚೀಫ್ ಜಸ್ಟೀಸ್ ಆಫ್ ಇಂಡಿಯಾ) ಹೊರಗಿಡುವ ಮಸೂದೆಯನ್ನು ಮಂಡಿಸಲು ಕೇಂದ್ರ ಸರ್ಕಾರ ಮುಂದಾಗಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:Asia Cup 2023 ಕ್ಕೆ ಪಾಕಿಸ್ತಾನ ತಂಡ ಪ್ರಕಟ: ಏಕದಿನ ತಂಡಕ್ಕೆ ಮರಳಿದ ಫಹೀಮ್ ಅಶ್ರಫ್
ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪಿನಲ್ಲೇನಿದೆ:
2023ರ ಮಾರ್ಚ್ ನಲ್ಲಿ ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠ ಐತಿಹಾಸಿಕ ತೀರ್ಪನ್ನು ನೀಡಿತ್ತು. “ಮುಖ್ಯ ಚುನಾವಣಾ ಆಯುಕ್ತ ಹಾಗೂ ಚುನಾವಣಾ ಆಯುಕ್ತರ ನೇಮಕಾತಿಯಲ್ಲಿ ಕೇಂದ್ರ ಸರ್ಕಾರದ ಹಸ್ತಕ್ಷೇಪ ತಡೆಗಟ್ಟುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ ನ ಜಸ್ಟೀಸ್ ಕೆಎಂ ಜೋಸೆಫ್ ನೇತೃತ್ವದ ಪಂಚ ಸದಸ್ಯ ಸಾಂವಿಧಾನಿಕ ಪೀಠ, ಸಂಸತ್ ಈ ಬಗ್ಗೆ ಹೊಸ ಕಾನೂನು ಮಾಡುವವರೆಗೆ ಆದೇಶ ಚಾಲ್ತಿಯಲ್ಲಿರಲಿದೆ.
ಅದರಂತೆ ಮುಖ್ಯ ಚುನಾವಣಾ ಆಯುಕ್ತ ಹಾಗೂ ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡುವ ಸಮಿತಿಯಲ್ಲಿ ಪ್ರಧಾನಮಂತ್ರಿ, ಲೋಕಸಭೆಯ ವಿರೋಧ ಪಕ್ಷದ ನಾಯಕ, ಸುಪ್ರೀಂಕೋರ್ಟ್ ಚೀಫ್ ಜಸ್ಟೀಸ್ ಸದಸ್ಯರಾಗಿರಲಿದ್ದು, ಸಮಿತಿ ಶಿಫಾರಸು ಮಾಡಿದ ಹೆಸರನ್ನು ಆಧರಿಸಿ ರಾಷ್ಟ್ರಪತಿ ಮುಖ್ಯಚುನಾವಣಾ ಆಯುಕ್ತ ಮತ್ತು ಚುನಾವಣಾ ಆಯುಕ್ತರನ್ನು ನೇಮಕ ಮಾಡುವಂತೆ ಮಹತ್ವದ ತೀರ್ಪನ್ನು ನೀಡಿತ್ತು ಎಂದು ವರದಿ ವಿವರಿಸಿದೆ.
ಇದೀಗ ಕೇಂದ್ರ ಸರ್ಕಾರ ರಾಜ್ಯ ಸಭೆಯಲ್ಲಿ ಮಂಡಿಸಲು ನಿರ್ಧರಿಸಿರುವ ಮಸೂದೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಮತ್ತು ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡುವ ಸಮಿತಿಯಿಂದ ಸಿಜೆಐ ಅವರನ್ನು ಹೊರಗಿಡುವ ಪ್ರಸ್ತಾವನೆ ಇದ್ದಿರುವುದಾಗಿ ವರದಿ ತಿಳಿಸಿದೆ.