Advertisement

ಕಾಂಗ್ರೆಸ್ಸಿಗರ ಮೇಲೆ ಇಡಿ-ಐಟಿ ದಾಳಿಗೆ ಸಂಚು

11:59 PM Apr 04, 2023 | Team Udayavani |

ಬೆಂಗಳೂರು: ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನಾಯಕರು, ಅಭ್ಯರ್ಥಿಗಳು ಹಾಗೂ ಕಾರ್ಯಕರ್ತರ ಮೇಲೆ ಐಟಿ- ಇಡಿ ಅಧಿಕಾರಿಗಳು ದಾಳಿ ಮಾಡುವ ಸಾಧ್ಯತೆಗಳಿವೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

Advertisement

ಮಂಗಳವಾರ ತಡರಾತ್ರಿ ದಿಲ್ಲಿಯಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ಬಿಜೆಪಿ ಐಟಿ-ಇಡಿ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ.

ಈ ಇಲಾಖೆಗಳ ಅಧಿಕಾರಿಗಳು ನಮ್ಮ ಮುಖಂಡರ ಮನೆ, ಕಚೇರಿ ಮೇಲೆ ದಾಳಿಯ ಬೆದರಿಕೆ ಹಾಕುತ್ತಿದ್ದಾರೆ. ಇದಕ್ಕೆಲ್ಲ ನಾವು ಬಗ್ಗುವುದಿಲ್ಲ ಎಂದರು. ನಮ್ಮ ಹಿತೈಷಿಗಳು, ಬೆಂಬಲಿಗರನ್ನೇ ಗುರಿಯಾಗಿಸಿಕೊಂಡು ದಾಳಿಗೆ ಸಂಚು ರೂಪಿಸಲಾಗಿದೆ ಎಂದು ಶಿವಕುಮಾರ್‌ ಆರೋಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next