ನವದೆಹಲಿ:ಕೇಂದ್ರ ಸರ್ಕಾರ ಪಶ್ಚಿಮಬಂಗಾಳ ರೈತರ ಜತೆ ಮುಕ್ತ ಮಾತುಕತೆ ನಡೆಸಬೇಕು ಎಂದು ಭಾರತೀಯ ಕಿಸಾನ್ ಒಕ್ಕೂಟ(ಬಿಕೆಯು)ದ ಮುಖಂಡ ರಾಕೇಶ್ ಟಿಕಾಯತ್ ಅವರು ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಭೇಟಿಗೂ ಮುನ್ನ ಈ ಸಲಹೆ ನೀಡಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಲಾಕ್ ಡೌನ್ ಎಫೆಕ್ಟ್ : ನಿರುದ್ಯೋಗದಿಂದ ನೊಂದ ನಟ ಆತ್ಮಹತ್ಯೆಗೆ ಯತ್ನ!
ಮಮತಾ ಬ್ಯಾನರ್ಜಿ ಅವರೊಂದಿಗಿನ ಮಾತುಕತೆಯನ್ನು ಖಚಿತಪಡಿಸಿರುವ ಟಿಕಾಯತ್ ಅವರು, ಬುಧವಾರ(ಜೂನ್ 09) ಮಧ್ಯಾಹ್ನ ಪಶ್ಚಿಮಬಂಗಾಳ ಮುಖ್ಯಮಂತ್ರಿಯನ್ನು ಭೇಟಿಯಾಗುವುದಾಗಿ ತಿಳಿಸಿದ್ದಾರೆ. ಈ ವೇಳೆ ನಾವು ಕೃಷಿ, ಆರೋಗ್ಯ, ಶಿಕ್ಷಣ ಮತ್ತು ಸ್ಥಳೀಯ ರೈತರ ಸಮಸ್ಯೆ ಕುರಿತು ಚರ್ಚಿಸುವುದಾಗಿ ತಿಳಿಸಿದ್ದಾರೆ ಎಂದು ಎಎನ್ ಐ ವರದಿ ಮಾಡಿದೆ.
ಕೇಂದ್ರ ಸರ್ಕಾರ ಪಶ್ಚಿಮಬಂಗಾಳ ರೈತರ ಜತೆ ಮುಕ್ತ ಮಾತುಕತೆ ನಡೆಸಬೇಕು. ನಿಯಮದ ಪ್ರಕಾರ ಉತ್ತರಪ್ರದೇಶದಲ್ಲಿ ಪ್ರತಿ ತಿಂಗಳು ಜಿಲ್ಲಾಧಿಕಾರಿಗಳು ಸಭೆ ನಡೆಸುತ್ತಾರೆ. ಜಿಲ್ಲಾಧಿಕಾರಿಗಳು ಮತ್ತು ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಹಾಜರಿರುತ್ತಾರೆ. ಈ ನಿಯಮವನ್ನು ಎಲ್ಲಾ ರಾಜ್ಯಗಳಲ್ಲಿಯೂ ಜಾರಿಗೊಳಿಸಬೇಕು ಎಂದು ಹೇಳಿದರು.
ಪಶ್ಚಿಮಬಂಗಾಳ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಟಿಕಾಯತ್ ಅವರು ತೃಣಮೂಲ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ನಡೆಸಿದ್ದರು. ಈ ವೇಳೆ ಮಮತಾ ಬ್ಯಾನರ್ಜಿ ಸ್ಪರ್ಧಿಸಿದ್ದ ನಂದಿಗ್ರಾಮದಲ್ಲಿಯೂ ಚುನಾವಣಾ ಪ್ರಚಾರ ನಡೆಸಿ ಬಿಜೆಪಿ ವಿರುದ್ಧ ಮತಚಲಾಯಿಸುವಂತೆ ತಿಳಿಸಿದ್ದರು.