Advertisement

ಎರಡು ವರ್ಷಗಳಲ್ಲಿ ಜಮ್ಮು ಕಾಶ್ಮೀರಕ್ಕೆ 9 ಸಾವಿರ ಕೋ.ರೂ. ಭದ್ರತಾ ಖರ್ಚು

09:11 PM Apr 30, 2022 | Team Udayavani |

ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಪಡಿಸಿದ ಬಳಿಕದ 28 ತಿಂಗಳಲ್ಲಿ ಅಲ್ಲಿಗೆ 9 ಸಾವಿರ ಕೋಟಿಗೂ ಹೆಚ್ಚು ಮೊತ್ತವನ್ನು ಭದ್ರತೆ ಕಾರಣಕ್ಕಾಗಿ ವಿನಿಯೋಗಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯವು ತಿಳಿಸಿದೆ.

Advertisement

370 ಹಾಗೂ 35 (ಎ) ವಿಧಿಯನ್ನು ರದ್ದುಮಾಡಿ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್‌ ಎಂದು ಎರಡು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶ ರಚಿಸಿ 2019ರ ಆಗಸ್ಟ್‌ 5ರಂದು ಕೇಂದ್ರ ಸರಕಾರ ಆದೇಶ ಹೊರಡಿಸಿದ ಬಳಿಕ 9,120.69 ಕೋ.ರೂ. ಅನ್ನು ಭದ್ರತೆ ಕಾರಣಕ್ಕಾಗಿ ಖರ್ಚು ಮಾಡಲಾಗಿದೆ ಎಂದು ಗೃಹ ಸಚಿವಾಲಯವು ಬಿಡುಗಡೆ ಮಾಡಿರುವ 2020-21ರ ವಾರ್ಷಿಕ ವರದಿಯಲ್ಲಿ ಉಲ್ಲೇಖೀಸಲಾಗಿದೆ.

ಇದನ್ನೂ ಓದಿ : ಕಲಿಕೆಗೆ ವಯಸ್ಸು ಅಡ್ಡಿಯಲ್ಲ:10ನೇ ತರಗತಿ ಪರೀಕ್ಷೆಗೆ ಹಾಜರಾದ 58 ವರ್ಷದ ಶಾಸಕ !

Advertisement

Udayavani is now on Telegram. Click here to join our channel and stay updated with the latest news.

Next