ನವದೆಹಲಿ : ದೆಹಲಿಯಲ್ಲಿ ಕೇಂದ್ರ ಕೃಷಿ ಕಾಯ್ದೆಯ ವಿರುದ್ಧ ರೈತ ಸಂಘಟನೆಗಳು ನಡೆಸಿದ ಟ್ರ್ಯಾಕ್ಟರ್ ಪರೇಡ್ ಹಿಂಸಾಚಾರಕ್ಕೆ ತಿರುಗಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಹೆಚ್ಚುವರಿ ಅರೆಸೈನಿಕ ತುಕಡಿಗಳನ್ನು ನಿಯೋಜಿಸಿದೆ.
ಓದಿ : 4 ವರ್ಷದ ಜೈಲುವಾಸ ಅಂತ್ಯ; ಜ.27ರಂದು ಎಐಎಡಿಎಂಕೆ ಮಾಜಿ ನಾಯಕಿ ಶಶಿಕಲಾ ಬಿಡುಗಡೆ
ಮಂಗಳವಾರ(ಜ. 26) ತಡರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ, ದೆಹಲಿ ಪೊಲೀಸ್ ಆಯುಕ್ತ ಎಸ್.ಎನ್. ಶ್ರೀವಾಸ್ತವ ಅವರನ್ನೊಳಗೊಂಡ ಉನ್ನತ ಮಟ್ಟದ ಸಭೆಯಲ್ಲಿ ಹೆಚ್ಚುವರಿ ಅರೆಸೈನಿಕ ಸಿಬ್ಬಂದಿಯನ್ನು ನಿಯೋಜಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಹಿಂಸಾಚಾರದಲ್ಲಿ ಭಾಗಿಯಾಗಿರುವವರನ್ನು ಗುರುತಿಸಿ ಕ್ರಮ ಕೈಗೊಳ್ಳುವಂತೆ ದೆಹಲಿ ಪೊಲೀಸರಿಗೆ ಶಾ ನಿರ್ದೇಶನ ನೀಡಿದ್ದಾರೆ. ಘಟನೆ ಹಿಂಸಾಚಾರಕ್ಕೆ ತಿರುಗಿದಾಗ ನಿನ್ನೆ(ಜ. 26) ಮಧ್ಯಾಹ್ನದಿಂದಲೇ ಭಾರತೀಯ ಟೆಲಿಗ್ರಾಫ್ ಕಾಯ್ದೆ 1855 ರ ಸೆಕ್ಷನ್ 7 ರ ಅಡಿಯಲ್ಲಿ ಸಾರ್ವಜನಿಕ ಸುರಕ್ಷತೆಯನ್ನು ಕಾಪಾಡಿಕೊಳ್ಳುವ ಮತ್ತು ಸಾರ್ವಜನಿಕ ತುರ್ತು ಪರಿಸ್ಥಿತಿಯ ಹಿತದೃಷ್ಟಿಯಿಂದ, ಸಿಂಘು, ಟಿಕ್ರಿ ಮುಂತಾದ ಪ್ರದೇಶಗಳಲ್ಲಿ ಅಂತರ್ಜಾಲ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಆದೇಶಿಸಲಾಗಿತ್ತು.
Related Articles
ಕೇಂದ್ರ ಗೃಹ ಕಾರ್ಯದರ್ಶಿ ದೆಹಲಿಯ ಪರಿಸ್ಥಿತಿ ಬಗ್ಗೆ ಗೃಹ ಸಚಿವರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಪರಿಸ್ಥಿತಿ ನಿಭಾಯಿಸಲು ಕ್ಷಿಪ್ರ ಪ್ರಹಾರ ದಳವನ್ನು ನಿಯೋಜಿಸಲಾಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಓದಿ : ಪತ್ನಿ ದೂರವಾದಳೆಂದು 18 ಮಹಿಳೆಯರ ಸರಣಿ ಹತ್ಯೆ: ಪೊಲೀಸರಿಂದ ಆರೋಪಿಯ ಬಂಧನ
Delhi: Heavy security deployment near Red Fort in the national capital.
— ANI (@ANI) January 26, 2021
'83 Police personnel were injured after being attacked by agitating farmers yesterday,' as per Delhi Police. pic.twitter.com/AvK7DVtsEY