ನವದೆಹಲಿ:ದೇಶದಲ್ಲಿ ಕೋವಿಡ್ 19 ಸೋಂಕು ಬಿಕ್ಕಟ್ಟು ತಲೆದೋರಿದ ಹಿನ್ನೆಲೆಯಲ್ಲಿ ಮುಂದಿನ ಎರಡು ತಿಂಗಳ ಕಾಲ ಪ್ರಧಾನಿ ಗರೀಬ್ ಕಲ್ಯಾಣ್ ಅನ್ನ್ ಯೋಜನೆಯಡಿಯಲ್ಲಿ ದೇಶದ 80 ಕೋಟಿ ಜನರಿಗೆ ಉಚಿತ ಆಹಾರ ಧಾನ್ಯ ನೀಡುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ(ಏಪ್ರಿಲ್ 23) ಘೋಷಿಸಿದೆ.
ಇದನ್ನೂ ಓದಿ:ರಾಜಸ್ತಾನಕ್ಕೆ ಲಸಿಕೆ ಅಮೆರಿಕಾದಿಂದ ತೆಗೆದುಕೊಂಡು ಬಂದರಾ?
2021ರ ಮೇ ಅಂತ್ಯಕ್ಕೆ ಹಾಗೂ ಜೂನ್ ತಿಂಗಳಿನಲ್ಲಿ ಬಡವರಿಗೆ ಉಚಿತವಾಗಿ 5ಕೆಜಿ ಆಹಾರ ಧಾನ್ಯವನ್ನು ನೀಡಲಾಗುವುದು ಎಂದು ಕೇಂದ್ರ ಘೋಷಿಸಿದೆ. ಈ ಯೋಜನೆಯಡಿಯಲ್ಲಿ ಅಂದಾಜು 80 ಕೋಟಿ ಮಂದಿ ಪ್ರಯೋಜನ ಪಡೆಯಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.
ಭಾರತದ ಕೋವಿಡ್ ಎರಡನೇ ಅಲೆಯನ್ನು ಎದುರಿಸುತ್ತಿದ್ದು, ಇಂತಹ ಸಂದರ್ಭದಲ್ಲಿ ದೇಶದ ಜನರಿಗೆ ಪೌಷ್ಠಿಕಾಂಶ ಆಹಾರದ ಬೆಂಬಲ ದೊರೆಯುವುದು ಮುಖ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಈ ವೇಳೆ ತಿಳಿಸಿರುವುದಾಗಿ ವರದಿ ವಿವರಿಸಿದೆ.
80 ಕೋಟಿ ಜನರಿಗೆ ಉಚಿತವಾಗಿ ಪಡಿತರ ನೀಡಲು ಕೇಂದ್ರ ಸರ್ಕಾರ 26 ಸಾವಿರ ಕೋಟಿಗೂ ಅಧಿಕ ಹಣವನ್ನು ವ್ಯಯಿಸುತ್ತಿದೆ ಎಂದು ತಿಳಿಸಿದೆ. ಭಾರತದಲ್ಲಿ ಕಳೆದ ಕೆಲವು ದಿನಗಳಿಂದ ದಿನಂಪ್ರತಿ 3 ಲಕ್ಷಕ್ಕಿಂತಲೂ ಅಧಿಕ ಕೋವಿಡ್ ಸೋಂಕು ಪ್ರಕರಣ ವರದಿಯಾಗುತ್ತಿದೆ. ಈ ನಿಟ್ಟಿನಲ್ಲಿ ದೇಶದ ಹಲವು ರಾಜ್ಯಗಳಲ್ಲಿ ವಾರಾಂತ್ಯದ ಲಾಕ್ ಡೌನ್, ಕರ್ಫ್ಯೂ ಜಾರಿಗೊಂಡಿದೆ.