Advertisement

ಟಿಎಂಸಿ ಸೇರ್ಪಡೆ ಬೆನ್ನಲ್ಲೇ ಮುಕುಲ್ ರಾಯ್ ಝಡ್ ಶ್ರೇಣಿ ಭದ್ರತೆ ವಾಪಸ್ ಪಡೆದ ಕೇಂದ್ರ

11:28 AM Jun 17, 2021 | Team Udayavani |

ನವದೆಹಲಿ: ಭಾರತೀಯ ಜನತಾ ಪಕ್ಷವನ್ನು ತೊರೆದು ಮತ್ತೆ ತೃಣಮೂಲ ಕಾಂಗ್ರೆಸ್ ಸೇರ್ಪಡೆಗೊಂಡ ಬೆನ್ನಲ್ಲೇ ಮುಕುಲ್ ರಾಯ್ ಗೆ ನೀಡಲಾಗಿದ್ದ ಝಡ್ ಭದ್ರತೆಯನ್ನು ಕೇಂದ್ರ ಸರ್ಕಾರ ವಾಪಸ್ ಪಡೆದಿರುವುದಾಗಿ ವರದಿ ತಿಳಿಸಿದೆ.

Advertisement

ಇದನ್ನೂ ಓದಿ:ನಾಯಕತ್ವ ಬದಲಾವಣೆ ಕುರಿತ ಪ್ರಶ್ನೆಗಳಿಗೆ ಈಶ್ವರಪ್ಪ ಮೌನದ ಉತ್ತರ

ಪಶ್ಚಿಮಬಂಗಾಳದ ವಿಧಾನಸಭಾ ಚುನಾವಣೆಗೂ ಮುನ್ನ ಟಿಎಂಸಿ ತೊರೆದು ಬಿಜೆಪಿ ಸೇರಿದ್ದ ಮುಕುಲ್ ರಾಯ್ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದರು. ನಂತರ ಕೇಂದ್ರ ಸರ್ಕಾರ ರಾಯ್ ಗೆ ಝಡ್ ಶ್ರೇಣಿಯ ಭದ್ರತೆಯನ್ನು ನೀಡಿತ್ತು.

ಚುನಾವಣೆ ನಂತರ ಬದಲಾದ ರಾಜಕೀಯ ಸನ್ನಿವೇಶದ ಪರಿಣಾಮ ಮುಕುಲ್ ರಾಯ್ ಮತ್ತೆ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಗೆ ಸೇರ್ಪಡೆಗೊಂಡಿದ್ದರು. ಇದೀಗ ರಾಯ್ ಗೆ ನೀಡಲಾಗಿರುವ ಝಡ್ ಶ್ರೇಣಿಯ ಭದ್ರತೆಯನ್ನು ಹಿಂಪಡೆದಿರುವುದಾಗಿ ಕೇಂದ್ರದ ಸರ್ಕಾರ ಮೂಲಗಳು ತಿಳಿಸಿವೆ.

ಪಶ್ಚಿಮಬಂಗಾಳ ಸರ್ಕಾರ ಮುಕುಲ್ ರಾಯ್ ಗೆ ಈಗಾಗಲೇ ವೈ ಶ್ರೇಣಿಯ ಭದ್ರತೆಯನ್ನು ಒದಗಿಸಿರುವುದಾಗಿ ವರದಿ ವಿವರಿಸಿದೆ. ತಮಗೆ ನೀಡಿರುವ ಝಡ್ ಶ್ರೇಣಿಯ ಭದ್ರತೆಯನ್ನು ವಾಪಸ್ ಪಡೆಯುವಂತೆ ಮುಕುಲ್ ರಾಯ್ ಕೇಂದ್ರ ಗೃಹಸಚಿವಾಲಯಕ್ಕೆ ಪತ್ರದ ಮೂಲಕ ಮನವಿ ಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next