Advertisement

Ayodhya ರಾಮಮಂದಿರದ ಮೂಲಕ ಶತ ಶತಮಾನಗಳ ಕನಸು ನನಸು

12:26 AM Dec 12, 2023 | Team Udayavani |

ತುಮಕೂರು: ಶ್ರೀರಾಮ ಜನ್ಮ ಭೂಮಿಯಲ್ಲಿ ರಾಮ ಮಂದಿರ ನಿರ್ಮಾಣವಾಗುವ ಮೂಲಕ ಶತ ಶತಮಾನಗಳ ಕನಸು ನನಸಾಗುತ್ತಿದೆ. ಈ ಸಂದರ್ಭವನ್ನು ದೇಶದ ಜನರು ಭಕ್ತಿ, ಸಂಭ್ರಮದಿಂದ ಸ್ಮರಣೀಯವಾಗಿಸಿಕೊಳ್ಳಬೇಕು ಎಂದು ಶ್ರೀರಾಮ ಜನ್ಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಟ್ರಸ್ಟಿ, ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರು ಹೇಳಿದರು.

Advertisement

ನಗರದ ಶ್ರೀ ರಾಮಮಂದಿರದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆಯನ್ನು ತಾಲೂಕು ಮುಖಂಡರಿಗೆ ವಿತರಿಸಿ ಅವರು ಮಾತನಾಡಿದರು.

ಅಯೋಧ್ಯೆ ರಾಮಮಂದಿರದಲ್ಲಿ ಜನವರಿ 22ರಂದು ಶ್ರೀರಾಮ ಮೂರ್ತಿಯ ಶಿಲಾಬಿಂಬ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಎಲ್ಲರೂ ಪಾಲ್ಗೊಳ್ಳಲು ಸಾಧ್ಯವಾಗುವುದಿಲ್ಲ. ಅಂಥವರು ತಮ್ಮ ಗ್ರಾಮಗಳ ದೇವಸ್ಥಾನಗಳಲ್ಲಿ ಪೂಜೆ, ಹೋಮ, ಹವನ ಮುಂತಾದವುಗಳ ಮೂಲಕ ಪವಿತ್ರ ಸಂದರ್ಭವನ್ನು ಸ್ಮರಣೀಯವಾಗಿಸಿಕೊಳ್ಳಿ ಎಂದು ಹೇಳಿದರು. ಪ್ರಮುಖರು ಉಪಸ್ಥಿತರಿದ್ದರು.

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next