Advertisement

Centurion Test: ಟಾಸ್ ಗೆದ್ದ ದ.ಆಫ್ರಿಕಾ; ಭಾರತ ತಂಡದಲ್ಲಿ ಇಬ್ಬರು ಕನ್ನಡಿಗರು

02:05 PM Dec 26, 2023 | Team Udayavani |

ಸೆಂಚೂರಿಯನ್: ದಕ್ಷಿಣ ಆಫ್ರಿಕಾ ಟೆಸ್ಟ್ ಸವಾಲಿಗೆ ಸಜ್ಜಾಗಿರುವ ಭಾರತ ಮೊದಲ ಪಂದ್ಯವಾಡುತ್ತಿದೆ. ಸೆಂಚೂರಿಯನ್ ನ ಸೂಪರ್ ಸ್ಪೋರ್ಟ್ ಪಾರ್ಕ್ ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಮೊದಲು ಫೀಲ್ಡಿಂಗ್ ಮಾಡಲು ನಿರ್ಧರಿಸಿದೆ.

Advertisement

ಭಾರತ ಬಲಿಷ್ಠ ತಂಡದೊಂದಿಗೆ ಕಣಕ್ಕಿಳಿದಿದೆ. ನಾಯಕ ರೋಹಿತ್ ಜತೆ ಯಶಸ್ವಿ ಜೈಸ್ವಾಲ್ ಇನ್ನಿಂಗ್ಸ್ ಆರಂಭಿಸಿದ್ದಾರೆ. ಕೆಎಲ್ ರಾಹುಲ್ ಅವರಿಗೆ ವಿಕೆಟ್ ಕೀಪಿಂಗ್ ಜವಾಬ್ದಾರಿ ವಹಿಸಲಾಗಿದೆ. ಗಾಯಗೊಂಡಿರುವ ವೇಗಿ ಮೊಹಮ್ಮದ್ ಶಮಿ ಬದಲಿಗೆ ಕನ್ನಡಿಗೆ ಪ್ರಸಿಧ್ ಕೃಷ್ಣ ಆಡುವ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ.

ಸ್ಪಿನ್ನರ್ ಆಗಿ ಅಶ್ವಿನ್ ಆಡುತ್ತಿದ್ದು, ಆಲ್ ರೌಂಡರ್ ಕೋಟದಲ್ಲಿ ಜಡೇಜಾ ಬದಲು ಶಾರ್ದೂಲ್ ಅವಕಾಶ ಪಡೆದಿದ್ದಾರೆ.

ತಂಡಗಳು

ದಕ್ಷಿಣ ಆಫ್ರಿಕಾ : ಡೀನ್ ಎಲ್ಗರ್, ಏಡೆನ್ ಮಾರ್ಕ್ರಾಮ್, ಟೋನಿ ಡಿ ಜೊರ್ಜಿ, ಟೆಂಬಾ ಬವುಮಾ (ನಾ), ಕೀಗನ್ ಪೀಟರ್‌ಸನ್, ಡೇವಿಡ್ ಬೆಡಿಂಗ್‌ಹ್ಯಾಮ್, ಕೈಲ್ ವೆರ್ರೆನ್ನೆ (ವಿ.ಕೀ), ಮಾರ್ಕೊ ಜಾನ್ಸೆನ್, ಜೆರಾಲ್ಡ್ ಕೊಯೆಟ್ಜಿ, ಕಗಿಸೊ ರಬಾಡ, ನಾಂಡ್ರೆ ಬರ್ಗರ್

Advertisement

ಭಾರತ: ರೋಹಿತ್ ಶರ್ಮಾ (ನಾ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿ.ಕೀ), ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ

Advertisement

Udayavani is now on Telegram. Click here to join our channel and stay updated with the latest news.

Next