Advertisement

ಬಾಹುಬಲಿ ಮಹಾಮಸ್ತಾಕಾಭಿಷೇಕ ಧಾರ್ಮಿಕ ಕಾರ್ಯಕ್ರಮಕ್ಕೆ ಚಾಲನೆ

02:56 PM Feb 07, 2018 | Sharanya Alva |

ಹಾಸನ:ತ್ಯಾಗಮೂರ್ತಿ ಶ್ರವಣಬೆಳಗೊಳದ ಶ್ರೀ ಬಾಹುಬಲಿ ಮೂರ್ತಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಮಹಾಮಜ್ಜನ ಧಾರ್ಮಿಕ ಕಾರ್ಯಕ್ರಮಕ್ಕೆ ಬುಧವಾರ ವಿಧ್ಯುಕ್ತವಾಗಿ ಚಾಲನೆ ನೀಡಿದ್ದಾರೆ.

Advertisement

ಚಾವುಂಡರಾಯ ಸಭಾಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ರಾಜ್ಯಪಾಲ ವಜುಭಾಯ್ ವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಎ.ಮಂಜು, ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಅವರು ಅಧ್ಯಕ್ಷತೆ ವಹಿಸಿದ್ದು, ತ್ಯಾಗಮೂರ್ತಿ ಬಾಹುಬಲಿಯ ಮಹಾಮಜ್ಜನ ಕಾರ್ಯಕ್ಕೆ ಇಂದು ವಿಧ್ಯುಕ್ತವಾಗಿ ಚಾಲನೆ ನೀಡಿದ್ದು, ಫೆ.26ರವರೆಗೆ ಕಾರ್ಯಕ್ರಮ ನಡೆಯಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next